ವನ್ಯ ಜೀವಿ ಸಂಪತ್ತಿನಲ್ಲಿ ಕರ್ನಾಟಕ ಅಗ್ರ

24/11/2020

ಬೆಂಗಳೂರು ನ.24: ವನ್ಯ ಜೀವಿ ಸಂಪತ್ತಿನಲ್ಲಿ ಕರ್ನಾಟಕ ರಾಜ್ಯ ಅಗ್ರ ಸ್ಥಾನದಲ್ಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಜೈವಿಕ ಸಂಪತ್ತನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯವಾಗಿದೆ ಎಲ್ಲ ಒತ್ತಡಗಳನ್ನು ಮೀರಿ ಅರಣ್ಯ ಸಂಪತ್ತು ರಕ್ಷಣೆ ಮಾಡುವಲ್ಲಿ ಅರಣ್ಯ ಸಿಬ್ಬಂದಿಗಳ ಕೆಲಸ ಮೆಚ್ಚುವಂತಹದ್ದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅರಣ್ಯ ಇಲಾಖೆ ಸಿಬ್ಬಂದಿ ಅಧಿಕಾರಿಗಳಿಗೆ ಪದಕ ಪ್ರದಾನ ಮಾಡಿ ಅವರು ಮಾತನಾಡಿದರು. ಜಗತ್ತು ಒಂದಕ್ಕೊಂದು ಬೆಸೆದುಕೊಂಡಿರುವ ಬಲೆ ಎಂಬ ಪೂರ್ಣಚಂದ್ರ ತೇಜಸ್ವಿಯವರ ಸಾಲುಗಳನ್ನು ಸ್ಮರಿಸಿ, ರಾಜ್ಯ ಅರಣ್ಯ ಮತ್ತು ಜೀವ ಸಂಪತ್ತನ್ನು ಉಳಿಸುವಲ್ಲಿ ಮೊದಲ ಸ್ಥಾನದಲ್ಲಿ ಇದೆ.ವನ್ಯ ಜೀವಿ ಸಂಪತ್ತಿನಲ್ಲಿ ರಾಜ್ಯ ಅಗ್ರಸ್ಥಾನದಲ್ಲಿದೆ ಎಂದು ಹೇಳಿದರು.
ಹುಲಿ ಮತ್ತು ಆನೆ ಗಳ ಸಂಖ್ಯೆಯಲ್ಲಿ ದೇಶದಲ್ಲಿ ಎಂಟನೇ ಸ್ಥಾನದಲ್ಲಿದೆ. ಎಲ್ಲ ಒತ್ತಡಗಳನ್ನು ಮೀರಿ ಅರಣ್ಯ ಸಂಪತ್ತು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖಾ ಸಿಬ್ಬಂದಿಗಳ ಕಾರ್ಯ ಮೆಚ್ಚುವಂತಹದ್ದು.ಈ ಸಿಬ್ಬಂದಿಗಳ ಕರ್ತವ್ಯ ದಿಂದ ಅರಣ್ಯ ಸಂಪತ್ತು ರಕ್ಷಣೆಯಲ್ಲಿದೆ ಎಂದರು.