ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ

November 24, 2020

ಮಡಿಕೇರಿ ನ.24 : ಕೊಡಗು ಜಿಲ್ಲಾ ಪತ್ರಕರ್ತರ ಸಂಘದ 2019 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಈ ಬಾರಿ ಒಟ್ಟು 12 ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜಿಲ್ಲಾ ಪತ್ರಕರ್ತರ ಸಂಘದಿಂದ ನೀಡಲಾಗುವ ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಯನ್ನು ಪ್ರಜಾಸತ್ಯ ಪತ್ರಿಕೆಯಲ್ಲಿ ಪ್ರಕಟವಾದ ಗುಂಡಿಮಯ ರಸ್ತೆಯಲ್ಲಿ ಗ್ರಾಮೀಣ ಜನರ ಸರ್ಕಸ್ ವರದಿಗೆ ಹಿರಿಕರ ರವಿ ಪಡೆದುಕೊಂಡಿದ್ದಾರೆ.
ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ದೇಶಸೇವೆಗೂ ಸೈ-ಕ್ರೀಡೆಗೂ ಜೈ ವರದಿಗೆ ರೆಜಿತ್ ಕುಮಾರ್ ಪಡೆದುಕೊಂಡಿದ್ದಾರೆ.
ಸಂಘದ ಮಾಜಿ ಉಪಾಧ್ಯಕ್ಷರಾದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವಿಡಿಯೋಗ್ರಫಿ ಪ್ರಶಸ್ತಿಯನ್ನು ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ ನಿರ್ವಹಣೆಯಿಲ್ಲದ ಮಕ್ಕಳ ಗುಡಿ ಬೆಟ್ಟಕ್ಕೆ ವಿಶ್ವ ಕುಂಬೂರು ಪಡೆದುಕೊಂಡಿದ್ದಾರೆ.
ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೆÇನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಬ್ರಹ್ಮಗಿರಿ ಬೆಟ್ಟದ ತಪ್ಪಲನ್ನು ಮೈದಾನ ಮಾಡಲು ಅನುಮತಿ ಕೊಟ್ಟವರು ಯಾರು ವರದಿಗೆ ಐಮಂಡ ಗೋಪಾಲ್ ಸೋಮಯ್ಯ ಪಡೆದುಕೊಂಡಿದ್ದಾರೆ.
ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದ ಮಂಡಿಬೆಲೆ ರಾಜಣ್ಣ ತಮ್ಮ ತಂದೆ ಮಂಡಿಬೆಲೆ ಶಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ಪ್ರಶಸ್ತಿಯನ್ನು ಪ್ರಜಾವಾಣಿಯಲ್ಲಿ ಪ್ರಕಟವಾದ ಅರಣ್ಯದಲ್ಲಿ ಬೆಳೆಸಿ ಹಲಸು-ಬಿದಿರು ವರದಿಗೆ ರೆಜಿತ್ಕುಮಾರ್ ಪಡೆದುಕೊಂಡಿದ್ದಾರೆ.
ಆಪ್ತ ಸಮಾಲೋಚಕಿ ತೇಲಪಂಡ ಆರತಿ ಸೋಮಯ್ಯ ತಮ್ಮ ಮಾವ ಕೋಟೆರ ಮುತ್ತಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಆರೋಗ್ಯ ವರದಿಗಾಗಿ ಪ್ರಶಸ್ತಿಯನ್ನು ಪ್ರಜಾಸತ್ಯದಲ್ಲಿ ಪ್ರಕಟವಾದ ಸ್ತಬ್ದವಾದ ಸ್ಕ್ಯಾನಿಂಗ್ ಮಿಷನ್ ವರದಿಗೆ ಹೆಚ್.ಜೆ.ರಾಕೇಶ್ ಪಡೆದುಕೊಂಡಿದ್ದಾರೆ.
ಕೈಬುಲೀರ ಪಾರ್ವತಿ ಬೋಪಯ್ಯ ತಂದೆ-ತಾಯಿ ಉತ್ತಯ್ಯ-ಸುಬ್ಬವ್ವ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿ ಪ್ರಶಸ್ತಿಯನ್ನು ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾದ ಕಾವೇರಿ ಒಡಲು ಸೇರುತ್ತಿದೆ ಕಾಫಿ ಪಲ್ಪಿಂಗ್ ತ್ಯಾಜ್ಯ ವರದಿಗೆ ಮುಸ್ತಫಾ ಪಡೆದುಕೊಂಡಿದ್ದಾರೆ.
ರಾಷ್ಟ್ರೀಯ ಪತ್ರಕರ್ತ ಸಂಘದ ಸದಸ್ಯರಾಗಿರುವ ಎಸ್.ಎ.ಮುರುಳೀಧರ್ ತಮ್ಮ ತಾಯಿ ಪಾರ್ವತಮ್ಮ ಅಪ್ಪಸ್ವಾಮಿ ಹೆಸರಿನಲ್ಲಿ ಸ್ಥಾಪಿಸಿರುವ ಕೃಷಿ ವರದಿ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಇಳಿ ವಯಸ್ಸಿನಲ್ಲೂ ಬತ್ತದ ಕೃಷಿ ಪ್ರೀತಿ ವರದಿಗೆ ಪಳೆಯಂಡ ಪಾರ್ಥ ಚಿಣ್ಣಪ್ಪ ಪಡೆದುಕೊಂಡಿದ್ದಾರೆ.
ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ ಶೇಷಗಿರಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಹೈನುಗಾರಿಕೆ ವರದಿ ಪ್ರಶಸ್ತಿಯನ್ನು ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ಜಮೀನು ಇಲ್ಲದಿದ್ದರೂ ಹೈನುಗಾರಿಕೆಯಲ್ಲಿ ಯಶಸ್ಸು ಕಂಡ ಬಿ.ಆರ್.ಗಣಪತಿ ವರದಿಗೆ ಆರ್.ಸುಬ್ರಮಣಿ ಪಡೆದುಕೊಂಡಿದ್ದಾರೆ.
ಶಕ್ತಿ ಸಂಪಾದಕರಾದ ಬಿ.ಜಿ.ಅನಂತಶಯನ ತಮ್ಮ ಹೋಂಸ್ಟೇ ಆಲ್ಫೆನ್ ಗ್ಲೋ ಹೆಸರಿನಲ್ಲಿ ಸ್ಥಾಪಿಸಿರುವ ಸುದ್ದಿಛಾಯಾಚಿತ್ರ ಪ್ರಶಸ್ತಿಯನ್ನು ಪ್ರಜಾಸತ್ಯ ಪತ್ರಿಕೆಯಲ್ಲಿ ಪ್ರಕಟವಾದ ಮಂಜಿನ ನಗರಿಯ ವೈಭವ ರಾಜಾಸೀಟ್ ಛಾಯಾಚಿತ್ರಕ್ಕೆ ಹೆಚ್.ಜೆ.ರಾಕೇಶ್ ಪಡೆದುಕೊಂಡಿದ್ದಾರೆ.
ಸ್ವಸ್ಥ ಸಂಸ್ಥೆಯ ಮುಖ್ಯಸ್ಥೆ ಕಾಕಮಾಡ ಗಂಗಾ ಚಂಗಪ್ಪ ತಮ್ಮ ಮಾವ ಕಾಕಮಾಡ ನಾಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಶೈಕ್ಷಣಿಕ ವರದಿ ಪ್ರಶಸ್ತಿಯನ್ನು ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ಸರ್ಕಾರಿ ಶಾಲೆ ಮಕ್ಕಳಿಂದ ವೃಕ್ಷ ಕ್ರಾಂತಿಗೆ ಪಣ ವರದಿಗೆ ವಿಘ್ನೇಶ್ ಭೂತನಕಾಡು ಪಡೆದುಕೊಂಡಿದ್ದಾರೆ.
ಜಿಲ್ಲಾ ಪಂ.ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ತಮ್ಮ ತಾಯಿ ಬಲ್ಲಾರಂಡ ಮಾಚಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ರಾಜಕೀಯ ವರದಿ ಪ್ರಶಸ್ತಿಯನ್ನು ವಿಜಯವಾಣಿಯಲ್ಲಿ ಪ್ರಕಟವಾದ ರಾಜಕೀಯ ಪ್ರಾತಿನಿಧ್ಯ ಕೂಗು ವರದಿಗೆ ಸಣ್ಣುವಂಡ ಕಿಶೋರ್ ನಾಚಪ್ಪ ಪಡೆದುಕೊಂಡಿದ್ದಾರೆ.
ಸಮಾಜಸೇವಕ ಮೇರಿಯಂಡ ಸಂಕೇತ್ ಪೂವಯ್ಯ ತಮ್ಮ ತಂದೆ ಮೇರಿಯಂಡ ಪೂವಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಹುಲಿ ಸಂರಕ್ಷಣೆ ಕುರಿತ ವರದಿ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ವಿಸ್ತಾರವಾದ ನಾಗರಹೊಳೆಯಲ್ಲಿ ಹುಲಿ ಸಂಖ್ಯೆ ಹೆಚ್ಚಳ ವರದಿಗೆ ಸಣ್ಣುವಂಡ ಕಿಶೋರ್ ನಾಚಪ್ಪ ಪಡೆದುಕೊಂಡಿದ್ದಾರೆ.
ಬೆಳೆಗಾರ ಅಜ್ಜಮಾಡ ಕಟ್ಟಿ ಮಂದಯ್ಯ ತಮ್ಮ ತಂದೆ ತಾಯಿ ಅಜ್ಜಮಾಡ ಸುಬ್ಬಯ್ಯ ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಏರಿದ ಏಲಕ್ಕಿ ಬೆಲೆ-ಮೆಲೆನಾಡಿನಲ್ಲಿ ನೆಲಕಚ್ಚಿದ ಬೆಳೆ ವರದಿಗೆ ಕಾಯಪಂಡ ಶಶಿ ಸೋಮಯ್ಯ ಪಡೆದುಕೊಂಡಿದ್ದಾರೆ.
ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಿನಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಅಸ್ವಸ್ಥ ಪುತ್ರನ ಪಾಲನೆಯಲ್ಲಿ ವೃದ್ದ ವರದಿಗೆ ಪಾರ್ಥ ಚಿಣ್ಣಪ್ಪ ಪಡೆದುಕೊಂಡಿದ್ದಾರೆ.
ಮಂಡಿಬೆಲೆ ರಾಜಣ್ಣ ತಮ್ಮ ತಾಯಿ ದ್ಯಾವಮ್ಮ ಶ್ಯಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ದೃಶ್ಯಮಾಧ್ಯಮ ವರದಿಗೆ ಖಾಸಗಿ ತೋಟದಲ್ಲಿ ಮರಗಳ ಹನನ ವರದಿಗೆ ಐಮಂಡ ಗೋಪಾಲ್ ಸೋಮಯ್ಯ ಪಡೆದುಕೊಂಡಿದ್ದಾರೆ.
ತೇನನ ರಾಜೇಶ್ ಅವರು ತಮ್ಮ ತಂದೆ ದಿವಂಗತ ತೇನನ ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಸೇನೆಗೆ ಸಂಬಂಧಿಸಿದ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿಯನ್ನು ದಿಗ್ವಿಜಯ ಚಾನಲ್ ನಲ್ಲಿ ಪ್ರಸಾರವಾದ ತಲೆಗೆ ಗುಂಡು ಬಿದ್ದರೂ ಬದುಕಿ ಬಂದ ಶೌರ್ಯ ಚಕ್ರ ವಿಜೇತ ಮಹೇಶ್ ವರದಿಗೆ ಬಾಚರಣಿಯಂಡ ಅನುಕಾರ್ಯಪ್ಪ ಪಡೆದುಕೊಂಡಿದ್ದಾರೆ.
ಜಿಲ್ಲಾ ಪತ್ರಕರ್ತರ ಸಂಘದಿಂದ ನೀಡಲಾಗುವ ಈ ಎಲ್ಲಾ ಪ್ರಶಸ್ತಿಗಳನ್ನು ಸಂಘದ ವಾರ್ಷಿಕ ಮಹಾಸಭೆ ನಡೆಯುವ ದಿನದಂದು ನೀಡಿ ಗೌರವಿಸಲಾಗುವುದು.ಪ್ರಶಸ್ತಿ ಪಡೆದ ಎಲ್ಲಾ ಪತ್ರಕರ್ತ ಮಿತ್ರರಿಗೆ ಜಿಲ್ಲಾ ಪತ್ರಕರ್ತರ ಸಂಘ ಅಭಿನಂದನೆ ಸಲ್ಲಿಸುತ್ತದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!