ಎಸ್‍ಡಿಪಿಐಗೆ ಕೆ.ಜಿ.ಪೀಟರ್ ರಾಜೀನಾಮೆ

24/11/2020

ಮಡಿಕೇರಿ ನ.24 : ಮಡಿಕೇರಿ ನಗರಸಭೆಯ ಮಾಜಿ ಸದಸ್ಯ ಹಾಗೂ ಎಸ್‍ಡಿಪಿಐ ನ ಜಿಲ್ಲಾ ಉಪಾಧ್ಯಕ್ಷ ಕೆ.ಜಿ.ಪೀಟರ್ ಅವರು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು ವೈಯುಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಪಕ್ಷದಲ್ಲಿ ತಮಗೆ ಸದಸ್ಯತ್ವವನ್ನು ನೀಡಿ ನಗರಸಭಾ ಸದಸ್ಯನಾಗಿ ಆಯ್ಕೆಯಾಗಲು ಮತ್ತು ಜನಪರ ಕೆಲಸ ಮಾಡಲು ಎಸ್‍ಡಿಪಿಐ ಮುಖಂಡರುಗಳು ಅವಕಾಶ ನೀಡಿದ್ದು, ಅವರಿಗೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಪೀಟರ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.