ಕೊಡವ ಭಾಷಾ ಸರ್ಟಿಫಿಕೇಟ್/ ಡಿಪ್ಲೋಮಾ ಪ್ರವೇಶಕ್ಕೆ ಅವಕಾಶ

24/11/2020

ಮಡಿಕೇರಿ ನ.24 : ಪ್ರಸಕ್ತ(2020-21) ಶೈಕ್ಷಣಿಕ ಸಾಲಿನಿಂದ ಕೊಡವ ಭಾಷಾ ಸರ್ಟಿಫಿಕೇಟ್ ಮತ್ತು ಡಿಪ್ಲೋಮಾ ತರಗತಿ ಪ್ರಾರಂಭಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾನಿಲಯ ಅನುಮತಿ ನೀಡಿ ಆದೇಶ ಹೊರಡಿಸಿದೆ. ಈ ಸರ್ಟಿಫಿಕೇಟ್/ ಡಿಪ್ಲೋಮಾ ಕಾರ್ಯಕ್ರಮಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು.
ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಟ್ಟ ಯಾವುದೇ ಕಾಲೇಜಿನಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಆಯಾಯ ಕಾಲೇಜಿನ ಪ್ರಾಂಶುಪಾಲರು ಪ್ರಸ್ತಾವನೆ ಸಲ್ಲಿಸಿದಲ್ಲಿ ಈ ಕಾರ್ಯಕ್ರಮವನ್ನು ಈ ಶೈಕ್ಷಣಿಕ ವರ್ಷವೇ ಪ್ರಾರಂಭಿಸಬಹುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.