ನ.26 ರಂದು ಸಾಮರ್ಥ್ಯ ಆಧಾರಿತ ಸಾಲ ಯೋಜನೆ ಬಿಡುಗಡೆ

24/11/2020

ಮಡಿಕೇರಿ ನ.24 : ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ನಬಾರ್ಡ್) ಸಾಮರ್ಥ್ಯ ಆಧಾರಿತ ಸಾಲ ಯೋಜನೆ ಬಿಡುಗಡೆ ಕಾರ್ಯಕ್ರಮವು(2021-22) ನವೆಂಬರ್, 26 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಲೀಡ್ ಬ್ಯಾಂಕ್ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಭಾಂಗಣದಲ್ಲಿ ನಡೆಯಲಿದೆ. ಶಾಸಕರು, ಸಂಸದರು ಇತರರು ಪಾಲ್ಗೊಳ್ಳಲಿದ್ದಾರೆ ಎಂದು ನಬಾರ್ಡ್ ಜಿಲ್ಲಾ ವ್ಯವಸ್ಥಾಪಕರಾದ ಪಿ.ಬಿ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.