4 ವಾರಗಳಲ್ಲಿ ಕೊರೋನಾ ಲಸಿಕೆ ಬರಲಿದೆ

November 25, 2020

ಮೈಸೂರು ನ.25 : ಇನ್ನು ನಾಲ್ಕು ವಾರಗಳಲ್ಲಿ ಕೊರೋನಾ ಲಸಿಕೆ ಬರಬಹುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇನ್ನು ನಾಲ್ಕೈದು ವಾರಗಳಲ್ಲಿ ಕೊರೊನಾ ಲಸಿಕೆ ಬರಲಿದೆ. ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಹಲವು ರಾಜ್ಯಗಳ ಸಿಎಂ ಸಭೆ ಕರೆದಿದ್ದರು. ಕೊರೊನಾ ಲಸಿಕೆ ವಿಚಾರವಾಗಿಯೇ ಚರ್ಚೆ ನಡೆಸಲಾಗಿದೆ. ಅಲ್ಲದೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸಹ ಹೇಳಿದ್ದಾರೆ. ಇದೇ ವೇಳೆ ನಾಲ್ಕು ವಾರಗಳಲ್ಲಿ ಕೊರೊನಾ ಲಸಿಕೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ ಎಂದರು.

error: Content is protected !!