ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

25/11/2020

ನವದೆಹಲಿ ನ.25 : ಸತತ ಏರಿಕೆಯಿಂದ ಕಂಗಾಲಾಗಿದ್ದ ಚಿನ್ನದ ಗ್ರಾಹಕರ ಮೊಗದಲ್ಲಿ ಇದೀಗ ಮಂದಹಾಸ ಮೂಡುವಂತಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.
22 ಕ್ಯಾರೆಟ್ ಚಿನ್ನದ ಮೇಲೆ 900 ರೂ. ಇಳಿಕೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆ 48,250 ರೂ.ಗೆ ತಲುಪಿದೆ. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 980 ರೂ. ಇಳಿಕೆಯಾಗಿದ್ದು 10 ಗ್ರಾಂ ಚಿನ್ನದ ಬೆಲೆಯಲ್ಲಿ 52,630 ರೂ.ಗೆ ತಲುಪಿದೆ ಎಂದು ಎಚ್‍ಡಿಎಫ್‍ಸಿ ಸೆಕ್ಯುರಿಟೀಸ್ ಹಿರಿಯ ವಿಶ್ಲೇಷಕ ತಪನ್ ಪಟೇಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಮೇಲೆ 900 ರೂ. ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 46,200 ರೂ.ಗೆ ತಲುಪಿದೆ. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 980 ರೂ. ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆಯಲ್ಲಿ 50,400 ರೂ.ಗೆ ತಲುಪಿದೆ.
ಇನ್ನು ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡಿದೆ. 1,588 ರೂ. ಇಳಿಕೆಯಾಗಿದ್ದು 1 ಕೆಜಿ ಬೆಳ್ಳಿಯ ಬೆಲೆ 59,301 ರುಪಾಯಿಗೆ ತಲುಪಿದೆ.