ನ.28 ರಂದು ಕಸಾಪದಿಂದ ಶಿಕ್ಷಕ ಪುರಸ್ಕಾರ ಕಾರ್ಯಕ್ರಮ

25/11/2020

ಮಡಿಕೇರಿ ನ.25 : ಜಿಲ್ಲೆಯ ಕುಗ್ರಾಮಗಳಲ್ಲಿ ಎಲೆ ಮರೆಯ ಕಾಯಿಗಳಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 23 ಶಿಕ್ಷಕರಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನ.28 ರಂದು ಶಿಕ್ಷಕ ಪುರಸ್ಕಾರ ನೀಡಿ ಗೌರವಿಸಲಾಗುವುದೆಂದು ಪರಿಷತ್ ಅಧ್ಯಕ್ಷ ಬಿ.ಎಸ್.ಲೋಕೇಶ್‍ಸಾಗರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ರಾಜ್ಯೋತ್ಸವ ಶಿಕ್ಷಕ ಪುರಸ್ಕಾರ-2020 ಕಾರ್ಯಕ್ರಮ ಅಂದು ಮಧ್ಯಾಹ್ನ 2.30 ಗಂಟೆಗೆ ನಗರದ ದೇವರಾಜ ಅರಸು ಭವನದಲ್ಲಿ ನಡೆಯಲಿದೆ ಎಂದರು. ಕೊಡಗಿನ ಐದು ತಾಲ್ಲೂಕುಗಳಿಂದ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಪೌಢವಿಭಾಗ, ಪದವಿ ಪೂರ್ವ ಕಾಲೇಜಿನಿಂದ ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದು, ಸಾಹಿತ್ಯ ಕ್ಷೇತ್ರ ಮಾತ್ರವಲ್ಲದೇ ಇತರ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ ಶಿಕ್ಷಕರನ್ನು ಸನ್ಮಾನಿಸಲಾಗುತ್ತಿದೆ. ಅಲ್ಲದೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದ ಶಿಕ್ಷಕರನ್ನು ಕೂಡ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದೆಂದರು.
ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠದ ಶ್ರೀಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಉದ್ಘಾಟಿಸಲಿದ್ದು, ತನ್ನ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ತು ಸದಸ್ಯ ಸುನೀಲ್ ಸುಬ್ರಮಣಿ, ಮಡಿಕೇರಿ ತಾ.ಪಂ ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೋ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಮಹಾಲಿಂಗಯ್ಯ, ಕೊಡಗು ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎಸ್, ಚೇತನ್ ಪಾಲ್ಗೊಳ್ಳಲಿದ್ದಾರೆ.
::: ಪುರಸ್ಕರಿಸಲ್ಪಡುವ ಶಿಕ್ಷಕರು :::
ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲೆ ಡಾ. ಎ.ಎಸ್.ಪೂವಮ್ಮ, ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಾಧ್ಯಾಪಕ ಡಾ. ಎಂ.ಬಿ.ಕಾವೇರಪ್ಪ, ಮಡಿಕೇರಿಯ ಫೀ.ಮಾ.ಕಾರ್ಯಪ್ಪ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಕರುಣಾಕರ ನಿಡಿಂಜೆ, ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕ ಜಮೀರ್ ಅಹಮದ್, ಭಾಗಮಂಡಲ ಕಾವೇರಿ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ.ಜಾನಕಿ, ಶಿರಂಗಾಲ ಪದವಿಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕ ಹಂಡ್ರಂಗಿ ನಾಗರಾಜ್, ಆಲೂರು ಸಿದ್ದಾಮಠ ಸ.ಪ.ಪೂ.ಕಾಲೇಜಿನ ಉಪನ್ಯಾಸಕ ಗಣಪತಿ ಭಟ್, ಶ್ರೀಮಂಗಲ ಪದವಿಪೂರ್ವ ಕಾಲೇಜಿನ ಎಂ.ಎನ್. ಸುನೀತ, ವಿರಾಜಪೇಟೆ ಸಂತಅನ್ನಮ್ಮ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಎಂ.ಎನ್, ಹೇಮಂತ್ ಕುಮಾರ್, ವಿರಾಜಪೇಟೆ ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ಶಿಕ್ಷಕ ಲಾಲ್‍ಕುಮಾರ್, ಕುಶಾಲನಗರ ಮೂಕಾಂಬಿಕ ಪ್ರೌಢಶಾಲೆ ಮುಖ್ಯಶಿಕ್ಷಕ ಗೋಪಾಲ್, ಚೇರಂಬಾಣೆ ಅರುಣ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕ ಪರಮೇಶ್, ಐಗೂರು ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ರಂಜಿನಿ ಕಾರ್ಯಪ್ಪ, ನಾಪೆÇೀಕ್ಲುವಿನ ಚೆರಿಯಪರಂಬು ಸ.ಹಿ.ಪ್ರಾ. ಶಾಲೆಯ ಶಿಕ್ಷಕರು ಸುಕುಮಾರ್ ತೊರೆನೂರು, ಕುಶಾಲನಗರದ ಗೊಂದಿ ಬಸವನಹಳ್ಳಿ ಸ.ಹಿ.ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜಲಜಾಕ್ಷಿ, ಚನ್ನನಕೋಟೆ ಸ.ಹಿ.ಪ್ರಾ.ಶಾಲೆಯ ಶಿಕ್ಷಕಿ ಜಾಜಿ, ಬೆಟ್ಟಗೇರಿ ಅಂಜನಗೇರಿ ಸ.ಹಿ.ಪ್ರಾಥಮಿಕ ಶಾಲೆಯ ಶಿಕ್ಷಕಿ ಉದಯ್, ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಅನಿತ, ಜಕ್ಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮನೋಹರ್, ಕೋಕೇರಿ ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕಿ ಪಿ.ಎಸ್. ಶರೀನ, ಚಿಕ್ಲಿಹೊಳೆ ಸ.ಕಿ.ಪ್ರಾ.ಶಾಲೆಯ ಶಿಕ್ಷಕಿ ಬಿಂದು, ದುಬಾರೆ ಸ.ಕಿ.ಪ್ರಾ.ಶಾಲೆಯ ಲಿಡಿಯಾ ಪಿಂಟೊ ಅವರಿಗೆ ರಾಜ್ಯೋತ್ಸವ ಶಿಕ್ಷಕ ಪುರಸ್ಕಾರ ನೀಡಿ ಗೌರವಿಸಲಾಗುವುದೆಂದು ಲೋಕೇಶ್ ಸಾಗರ್ ಮಾಹಿತಿ ನೀಡಿದರು.
::: ವಿಶೇಷ ಸನ್ಮಾನಿತರು :::
ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪುರಸ್ಕøತರಾದ ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯ ಮುಖ್ಯೋಪಾಧ್ಯಯರಾದ ಕುಂತಿಬೋಪಯ್ಯ, ಹಾಕತ್ತೂರು ಸ.ಪ್ರೌ.ಶಾಲೆಯ ಮುಖ್ಯ ಶಿಕ್ಷಕ ಕೆ.ಎ. ರಾಮಚಂದ್ರ, ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಯೋಗೇಶ್, ಗಾಳಿಬೀಡು ನವೋದಯ ವಿದ್ಯಾಸಂಸ್ಥೆಯ ಉಪನ್ಯಾಸಕ ಮಾರುತಿ ದಾಸಣ್ಣನವರ್, ಪೆÇನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಡ್ಯಾನಿ ಈರಪ್ಪ, ಹುಲುಸೆ ಸ.ಹಿ.ಪ್ರಾ.ಶಾಲೆಯ ಶಿಕ್ಷಕ ಶಾಂತಕುಮಾರ್, ಹಂಡ್ಲಿ ಸ.ಪ್ರೌ.ಶಾಲೆಯ ಶಿಕ್ಷಕ ವಿಕ್ರಾಂತ್, ಭಾರತ್ ಸೈಟ್ ಮತ್ತು ಗೈಡ್ಸ್ ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರ, ಭಾರತ್ ಸೇವಾ ದಳದ ಸದಸ್ಯ ಕರುಂಬಯ್ಯ, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕಿ ರೇವತಿ ರಮೇಶ್, ಮೊರಾರ್ಜಿ ದೇಸಾಯಿ ವಸತಿಶಾಲೆಯ ಪ್ರಾಂಶುಪಾಲೆ ಚಂದ್ರಶೇಖರ ರೆಡ್ಡಿ, ಕುಶಾಲನಗರ ಜ್ಞಾನಭಾರತಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕ ಉತ್ತಪ್ಪ, ರಾಜ್ಯ ಪ್ರಶಸ್ತಿ ಪುರಸ್ಕøತರಾದ ಚೆಂಬು ಪ್ರೌಢಶಾಲೆಯ ಕಾಮಾಕ್ಷಿ, ಕೋಟೆ ಪರಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀನಿವಾಸ್‍ರಾವ್, ಕುಶಾಲನಗರ ಸಾವಿತ್ರಿಬಾಯಿ ಪುಲೆ ರಾಜ್ಯ ಪುರಸ್ಕೃತರು ಶಿಕ್ಷಕಿ ಜಲಜಾಕ್ಷಿ ಅವರನ್ನು ಸನ್ಮಾನಿಸಲಾಗುವುದು ಎಂದರು.
ಕೊಡಗು ಜಿಲ್ಲಾ ಕಸಾಪ ವತಿಯಿಂದ ನಡೆದ ಜಿಲ್ಲಾ ಸಮ್ಮೇಳನದಲ್ಲಿ ಹಣವನ್ನು ಉಳಿಸಲಾಗಿದ್ದು, ಸಾರ್ವಜನಿಕರ ಹಾಗೂ ಶಿಕ್ಷಕರ ಸಹಕಾರದಿಂದ ಸಂಗ್ರಹಿಸಲಾದ 5 ಲಕ್ಷ ಸೇರಿದಂತೆ ಒಟ್ಟು ರೂ.10 ಲಕ್ಷ ವೆಚ್ಚದಲ್ಲಿ ಕುಶಾಲನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಗ್ಯಾಲರಿಯನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಕಳೆದ ಸಾಲಿನಲ್ಲಿ ಪರಿಷತ್ ವತಿಯಿಂದ ಆಯೋಜಿಸಲಾಗಿದ್ದ ಅನೇಕ ಕಾರ್ಯಕ್ರಮಗಳನ್ನು ಕೋವಿಡ್ ಮಾರ್ಗಸೂಚಿ ಹಿನ್ನೆಲೆ ನಡೆಸಲು ಸಾಧ್ಯವಾಗಿಲ್ಲ. ಪ್ರಸ್ತುತ ಐದು ತಾಲ್ಲೂಕುಗಳಲ್ಲಿ ಮತ್ತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಕುಶಾಲನಗರದಲ್ಲಿ ಜಿಲ್ಲಾಮಟ್ಟದ ಭಾವಗೀತೆ ಸ್ಪರ್ಧೆ, ಪೊನ್ನಂಪೇಟೆಯಲ್ಲಿ ವಚನ ಸಾಹಿತ್ಯ ಕಾರ್ಯಕ್ರಮ, ಸೋಮವಾರಪೇಟೆಯಲ್ಲಿ ಸುಗ್ಗಿ ಕವಿಗೋಷ್ಠಿ, ಮಡಿಕೇರಿಯಲ್ಲಿ ದಾಸರ ಪದಗಳ ಕಾರ್ಯಕ್ರಮ ಹಾಗೂ ವಿರಾಜಪೇಟೆಯಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದರು.
ಪರಿಷತ್‍ಗೆ 50 ವರ್ಷ ತುಂಬಿದ ಹಿನ್ನೆಲೆ ಸುವರ್ಣ ಮಹೋತ್ಸವವನ್ನು ಅರ್ಥಪೂರ್ಣವಾಗಿ ನಡೆಸಲು ನಿರ್ಧರಿಸಲಾಗಿದೆ ಎಂದು ಲೋಕೇಶ್ ಸಾಗರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಸಾಪ ಜಿಲ್ಲಾ ನಿರ್ದೇಶಕರುಗಳಾದ ಕೆ.ಕೆ.ನಾಗರಾಜ್ ಶೆಟ್ಟಿ, ಕೋಡಿ ಚಂದ್ರಶೇಖರ್, ಧನಂಜಯ ಹಾಗೂ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್ ಉಪಸ್ಥಿತರಿದ್ದರು.