ನ.29 ರಂದು ಕರಿಕೆಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

25/11/2020

ಮಡಿಕೇರಿ ನ.25 : ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಅವರು ನ.29 ರಂದು ಕರಿಕೆ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನು ನಡೆಸಲಿದ್ದಾರೆ ಎಂದು ಸ್ಥಳೀಯ ಜಿ.ಪಂ ಸದಸ್ಯೆ ಕವಿತಾ ಪ್ರಭಾಕರ್ ಅವರು ತಿಳಿಸಿದ್ದಾರೆ.
ಕರಿಕೆ ವ್ಯವಸಾಯ ಸಹಕಾರ ಸಂಘದ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಗ್ರಾಮಸ್ಥರು ತಮ್ಮ ಅಹವಾಲನ್ನು ನೀಡಬಹದು ಮತ್ತು ಅಕ್ರಮ ಸಕ್ರಮದ ಕುರಿತು ಚರ್ಚಿಸಬಹುದೆಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.