ನ.29 ರಂದು ಮಡಿಕೇರಿಯಲ್ಲಿ ಸಾರ್ವಜನಿಕರಿಗೆ ಮುಕ್ತ ಭಾವಗೀತೆ ಸ್ಪರ್ಧೆ

25/11/2020

ಮಡಿಕೇರಿ ನ.25 : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ವತಿಯಿಂದ ತೃತೀಯ ವರ್ಷದ ಕನ್ನಡ ರಾಜ್ಯೋತ್ಸವ ಮತ್ತು ದಿ.ಅಬ್ದುಲ್ ಹಫೀಜ್ ಸಾಗರ್ ಜ್ಞಾಪಕಾರ್ಥ ಸಾರ್ವಜನಿಕರಿಗೆ ಮುಕ್ತ ಭಾವಗೀತೆ ಸ್ಪರ್ಧೆಯು ನವೆಂಬರ್, 29 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕೊಡಗು ಜಾನಪದ ಪರಿಷತ್ತಿನ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ವಿರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಪ್ರತಿಮ ಹರೀಶ್ ರೈ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್.ಮನು ಶೆಣೈ, ಇತರರು ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 2.30 ಗಂಟೆಗೆ ಸಮಾರೋಪ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ. ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರಧಾನ, ಸನ್ಮಾನ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.