ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 5293

November 26, 2020

ಮಡಿಕೇರಿ ನ. 26 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 15 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
13 ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 8 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5293 ಆಗಿದ್ದು, 5147 ಮಂದಿ ಗುಣಮುಖರಾಗಿದ್ದಾರೆ. 74
ಸಕ್ರಿಯ ಪ್ರಕರಣಗಳಿದ್ದು, 72 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 68 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.