ಕೊಡಗಿನಲ್ಲಿ ಮೊದಲ ಹಂತದಲ್ಲಿ 6 ಸಾವಿರ ಕೋವಿಡ್ ಲಸಿಕೆ ಸಂಗ್ರಹಕ್ಕೆ ಸಿದ್ಧತೆ

November 26, 2020

ಮಡಿಕೇರಿ ನ.26 : ಮಹಾಮಾರಿ ಕೊರೋನಾಗೆ ಲಸಿಕೆ ಸಂಗ್ರಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲೂ ಕೋವಿಡ್-19 ಲಸಿಕೆ ಸಂಗ್ರಹಿಸಿಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ನಗರದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲೇ ಸುಮಾರು 40 ಐಸ್ ಲೈನ್ಡ್ ರೆಫ್ರಿಜರೇಟರ್‍ಗಳನ್ನು ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ತಾಲೂಕು ಆಸ್ಪತ್ರೆಗಳಲ್ಲೂ ಈ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್ ಅವರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ 5.5 ಲಕ್ಷ ಜನಸಂಖ್ಯೆ ಇದ್ದು, ಮೊದಲ ಹಂತದಲ್ಲಿ 6 ಸಾವಿರ ಕೋವಿಡ್ ಲಸಿಕೆ ದಾಸ್ತಾನಿಗೆ ಸಿದ್ಧತೆ ನಡೆಸಲಾಗಿದೆ. ಪ್ರಥಮವಾಗಿ ಕೊರೋನಾ ವಾರಿಯರ್‍ಗಳಿಗೆ ಲಸಿಕೆ ನೀಡಲಾಗುತ್ತದೆ. ನಂತರ ಜಿಲ್ಲಾಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಲಸಿಕೆ ಲಭ್ಯವಾದ ಕೂಡಲೇ ಜಿಲ್ಲೆಯ ವಿವಿಧೆಡೆಗಳಿಗೆ ತಲುಪಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ.

error: Content is protected !!