ಮಡಿಕೇರಿಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

27/11/2020

ಮಡಿಕೇರಿ ನ.27 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ಸರ್ಕಾರದ ಎಸ್‍ಪಿ ಟಿಎಸ್‍ಪಿ ಯೋಜನೆ ಅಡಿಯಲ್ಲಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ/ಪಂಗಡದ ಎಂಬಿಬಿಎಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪುಸ್ತಕವನ್ನು ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಸಂಸ್ಥೆಯ ನಿರ್ದೇಶಕಾರದ ಡಾ. ಕಾರ್ಯಪ್ಪ ಕೆ.ಬಿ, ಮುಖ್ಯ ಆಡಳಿತಾಧಿಕಾರಿಗಳಾದ ಡಾ. ನಂಜುಂಡೇಗೌಡ, ಪ್ರಾಂಶುಪಾಲರಾದ ಡಾ. ವಿಶಾಲ್ ಕುಮಾರ್, ವೈದ್ಯಕೀಯ ಅಧಿಕ್ಷಕರಾದ ಡಾ. ಲೋಕೇಶ್ ಎ.ಜೆ, ಅಕಾಡೆಮಿಕ್ ರಿಜಿಸ್ಟಾರ್‍ರಾದ ಡಾ.ರವಿಕಿರಣ ಕಿಸಾನ, ಕಛೇರಿ ಅಧೀಕ್ಷಕರಾದ ಮೋಹನ್ ಟಿ.ಎಂ, ಗ್ರಂಥಪಾಲಕರು, ವೈದ್ಯಕೀಯ ವಿದ್ಯಾರ್ಥಿಗಳು ಹಾಜರಿದ್ದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ಸರ್ಕಾರದ ಎಸ್‍ಪಿ ಟಿಎಸ್‍ಪಿ ಯೋಜನೆ ಅಡಿಯಲ್ಲಿ ಬೋಧಕ ಆಸ್ಪತ್ರೆಯಲ್ಲಿ ಪರಿಶಿಷ್ಟ ಜಾತಿ/ಪಂಗಡದ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತಿದ್ದು, ಚಿಕಿತ್ಸೆಗೆ ದಾಖಲಾಗುವ ಸಂದರ್ಭದಲ್ಲಿ ಕಡ್ಡಾಯವಾಗಿ ಜಾತಿ ಧೃಡಿಕರಣ ಪತ್ರ ಸಲ್ಲಿಸಿ ಉಚಿತ ಚಿಕಿತ್ಸೆ ಪಡೆದುಕೊಳ್ಳುವಂತೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಕಾರ್ಯಪ್ಪ ಅವರು ತಿಳಿಸಿದ್ದಾರೆ.