ಪೊನ್ನಂಪೇಟೆ ನೂತನ ತಾಲ್ಲೂಕಿಗೆ 12 ಹುದ್ದೆ ಮಂಜೂರು

27/11/2020

ಮಡಿಕೇರಿ ನ.27 : ಕೊಡಗು ಜಿಲ್ಲೆಯ ಪೊನ್ನಂಪೇಟೆಯನ್ನು ನೂತನ ತಾಲ್ಲೂಕು ಕೇಂದ್ರವನ್ನಾಗಿ ಸರ್ಕಾರ ಘೋಷಣೆ ಮಾಡಿದೆ. ಈ ಹಿನ್ನೆಲೆ ಸರ್ಕಾರ ಶೀಘ್ರ 12 ಹುದ್ದೆಗಳ ಭರ್ತಿಗೆ ಆದೇಶ ಹೊರಡಿಸಿದೆ. ಈ 12 ಹುದ್ದೆಗಳಲ್ಲಿ ತಹಶೀಲ್ದಾರರು, ಶಿರಸ್ತೆದಾರರು, ಪ್ರಥಮ ದರ್ಜೆ ಸಹಾಯಕರು, ಆಹಾರ ನಿರೀಕ್ಷಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ನೇಮಕ ಮಾಡುವುದರ ಜೊತೆಗೆ ಹೊರಗುತ್ತಿಗೆ ಅಡಿ ಬೆರಳಚ್ಚುಗಾರರು, ವಾಹನ ಚಾಲಕರು ಮತ್ತು ಡಿ ಗ್ರೂಪ್ ನೌಕರರನ್ನು ನಿಯೋಜಿಸಿಕೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ.