ಒಂದು ರಾಷ್ಟ್ರ, ಒಂದು ಚುನಾವಣೆ

27/11/2020

ನವದೆಹಲಿ ನ.27 : ದೇಶದಲ್ಲಿ “ಒಂದು ರಾಷ್ಟ್ರ, ಒಂದು ಚುನಾವಣೆ” ಕುರಿತ ಚರ್ಚೆ ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್‍ನ ಕೇವಾಡಿಯಾದಲ್ಲಿ ನಡೆದ 80ನೇ ಅಖಿಲ ಭಾರತ ಅಧಿಕಾರಿಗಳ ಸಮಾವೇಶದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಲೋಸಭೆ, ವಿಧಾನಸಭಾ ಮತ್ತು ಸ್ಥಳೀಯ ಪಂಚಾಯತಿ ಮಟ್ಟದ ಎಲ್ಲಾ ಚುನಾವಣೆಗಳನ್ನು ಒಟ್ಟಿಗೆ ನಡೆಸುವ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಸಾಮಾನ್ಯ ಮತದಾರರ ಪಟ್ಟಿಯನ್ನು ಬಳಸಬಹುದು. ಈ ನಿಟ್ಟಿನಲ್ಲಿ ಡಿಜಿಟಲ್ ಕ್ರಾಂತಿ ಇದಕ್ಕೆ ನೆರವಾಗಲಿದೆ ಎಂದರು.
ಈ ನಿಟ್ಟಿನಲ್ಲಿ ಸಂವಿಧಾನ ದಿನದಂದು ಗಾಂಧಿಜೀ ಮತ್ತು ಸರ್ಧಾರ್ ವಲ್ಲಭಬಾಯಿ ಪಟೇಲ್ ಅವರನ್ನು ಸ್ಮರಿಸಬೇಕಾಗಿದೆ ಎಂದರು.
‘ಪ್ರತಿ ಕೆಲವು ತಿಂಗಳಿಗೆ, ದೇಶದ ಬೇರೆ ಬೇರೆ ಪ್ರದೇಶಗಳಲ್ಲಿ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದು ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಸಮಸ್ಯೆ ಬಗ್ಗೆ ಅಧ್ಯಯನ ನಡೆಯಬೇಕಿದೆ. ಇದಕ್ಕೆ ಅಧಿಕಾರಿಗಳು ಮಾರ್ಗದರ್ಶಕರಾಗಬಲ್ಲರು,’ ಎಂದು ಪ್ರಧಾನಿ ಹೇಳಿದ್ದಾರೆ.