ರೈತರ ಮೇಲೆ ಅಶ್ರುವಾಯು ಸಿಡಿಸಿದ ಪೊಲೀಸರು

27/11/2020

ಚಂಡೀಗಢ ನ.27 : ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿ ಚಲೋ ಚಳವಳಿ ಭಾಗವಾಗಿ ಪಂಜಾಬ್ ರೈತರು ಪೆÇಲೀಸ್ ಬ್ಯಾರಿಕೇಡ್ ಮುರಿದು ಹರ್ಯಾಣ ರಾಜ್ಯ ಪ್ರವೇಶಿಸಲು ಮುಂದಾದ ವೇಳೆ ಗುಂಪನ್ನು ಚದುರಿಸಲು ಪೆÇಲೀಸರು ಅಶ್ರುವಾಯು ಸಿಡಿಸಿದ ಪ್ರಸಂಗ ನಡೆದಿದೆ.
ಪಂಜಾಬ್-ಹರ್ಯಾಣ ಗಡಿಯ ಶಂಭು ಎಂಬಲ್ಲಿ ರೈತರು ಗುಂಪು ಸೇರಿ ದೆಹಲಿ ಚಲೋ ಆರಂಭಿಸಿ ಪೆÇಲೀಸ್ ಬ್ಯಾರಿಕೇಡ್ ತೆಗೆದು ನುಗ್ಗಲು ಪ್ರಯತ್ನಿಸುತ್ತಿದ್ದರು. ಆಗ ಹರ್ಯಾಣ ಪೆÇಲೀಸರು ಧ್ವನಿವರ್ಧಕ ಮೂಲಕ ಪ್ರತಿಭಟನಾಕಾರರಿಗೆ ಎಚ್ಚರಿಸುತ್ತಿದ್ದರು. ಈ ವೇಳೆ ಹರ್ಯಾಣ-ಪಂಜಾಬ್ ಶಂಭು ಅಂತರಾಜ್ಯ ಗಡಿಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪ್ರತಿಭಟನಾ ನಿರತ ರೈತರು ಗಗ್ಗರ್ ನದಿಗೆ ಎಸೆಯಲು ನೋಡಿದರು. ಕೆಲವರು ಕಪ್ಪು ಬಾವುಟ ಪ್ರದರ್ಶಿಸುತ್ತಿದ್ದರು.
ಪ್ರತಿಭಟನಾಕಾರರು ದೆಹಲಿಗೆ ತೆರಳದಂತೆ ಹರ್ಯಾಣ ಪೆÇಲೀಸರು ಹಲವು ಹಂತಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿದ್ದರು.