ಕೂರ್ಗ್ ವಿಲೇಜ್‌ಗೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

November 27, 2020

ಕೊಡಗು ಜಿಲ್ಲೆಯ ಕೇಂದ್ರ ಸ್ಥಾನವಾದ ಮಡಿಕೇರಿಯ ರಾಜಾಸೀಟು ಉದ್ಯಾನವನದ ಕೆಳಭಾಗದಲ್ಲಿ ಪ್ರವಾಸೋದ್ಯಮ ಇಲಾಖೆಯ ಮುಖಾಂತರ ಕೂರ್ಗ್ ವಿಲೇಜ್ ಕಲ್ಪನೆಯಡಿಯಲ್ಲಿ ನಿರ್ಮಿಸಲಾಗಿರುವ 15 ಮಳಿಗೆಗಳನ್ನು ವಿವಿಧ ಸರ್ಕಾರಿ ಇಲಾಖೆಗಳಿಗೆ ಈಗಾಗಲೇ ಹಂಚಿಕೆ ಮಾಡಲಾಗಿದೆ. ಸದರಿ ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆಗಳು/ಇಲಾಖಾ ಅಧೀನದಲ್ಲಿ ಬರುವ ಸಂಘ ಸಂಸ್ಥೆಗಳ ಮುಖಾಂತರ ಜಿಲ್ಲೆಯಲ್ಲಿ ಉತ್ಪಾದಿಸಲಾಗುವ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು.

ಕಾಮಗಾರಿಯು ಪೂರ್ಣಗೊಂಡಿದ್ದು, ಮುಂಬರುವ ದಿನಗಳಲ್ಲಿ ಸನ್ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಲಿದ್ದು, ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳು ಕೂರ್ಗ್ ವಿಲೇಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಕಿ ಇರುವ ಅಲಂಕಾರಿಕ ತೋಟಗಳ ನಿರ್ಮಾಣ, ಹೂಕುಂಡಗಳ ಜೋಡಣೆ ಇತ್ಯಾದಿ ಕಾಮಗಾರಿಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳಲು ನಿರ್ದೇಶನ ನೀಡಿದರು. ಸಂಬಂಧಪಟ್ಟ ಇಲಾಖಾಧಿಕಾರಿಗಳು ಹಾಜರಿದ್ದರು.

 

error: Content is protected !!