ಬಿಳಿಗೇರಿ ಗ್ರಾಮದಲ್ಲಿ 22 ಮನೆಗಳ ನಿರ್ಮಾಣ ಕಾರ್ಯ ಪೂರ್ಣ

27/11/2020

ಮಡಿಕೇರಿ,ನ.27: ಕೊಡಗು ಜಿಲ್ಲೆಯಲ್ಲಿ 2018ನೇ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ವಾಸದ ಮನೆಯನ್ನು ಕಳೆದುಕೊಂಡ ಸಂತ್ರಸ್ಥರಿಗೆ ವಿತರಿಸಲು ಮಡಿಕೇರಿ ತಾಲ್ಲೂಕು ಬಿಳಿಗೇರಿ ಗ್ರಾಮದಲ್ಲಿ ಒಟ್ಟು ರೂ.3.96 ಕೋಟಿ ವೆಚ್ಚದಲ್ಲಿ ಮೂಲಭೂತ ಸೌಕರ್ಯ ಮತ್ತು ಸುಸಜ್ಜಿತ ಬಡಾವಣೆಯೊಂದಿಗೆ 22 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಫಲಾನುಭವಿಗಳಿಗೆ ಹಸ್ತಾಂತರಿಸಲು ಸಿದ್ಧವಾಗಿವೆ.

ಸದರಿ ಮನೆಗಳನ್ನು ಸನ್ಮಾನ್ಯ ವಸತಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಮುಂಬರುವ ದಿನಗಳಲ್ಲಿ ಈಗಾಗಲೇ ಆಯ್ಕೆ ಮಾಡಲಾಗಿರುವ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಿದ್ದು, ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳು ಕೊಡಗು ಜಿಲ್ಲೆ, ಮಡಿಕೇರಿಯವರು ಇಂದು ಬಿಳಿಗೇರಿ ಗ್ರಾಮಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯ, ಬಡಾವಣೆ ಮತ್ತು ಮನೆಗಳನ್ನು ವೀಕ್ಷಿಸಿದರು. ಉಪವಿಭಾಗಾಧಿಕಾರಿ ಈಶ್ವರ ಕುಮಾರ್ ಕಾಂದೂ, ಪ್ರಭಾರ ಅಪರ ಜಿಲ್ಲಾಧಿಕಾರಿ ಶ್ರೀನಿವಾಸ್, ಮಡಿಕೇರಿ ತಹಶೀಲ್ದಾರ್ ಮಹೇಶ್ ಮತ್ತು ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.