ನಿವೃತ್ತ ಅಧಿಕಾರಿ ಅಯ್ಯಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

27/11/2020

ಮಡಿಕೇರಿ ನ.27 : ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ನಿವೃತ್ತ ಜೀವನ ಸಾಗಿಸುತ್ತಿರುವ ಅಯ್ಯಣ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಕೈಹಿಡಿದ ಅಯ್ಯಣ್ಣ ಅವರು ಕಾಂಗ್ರೆಸ್ ಸಿದ್ಧಾಂತವನ್ನು ಒಪ್ಪಿಕೊಂಡಿರುವುದಾಗಿ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷÀ ಮೀದೇರಿರ ನವೀನ್, ಪಕ್ಷದ ಹಿರಿಯ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಈ ಸಂದರ್ಭ ಹಾಜರಿದ್ದರು.