ನಾಪೋಕ್ಲು ಮಾರುಕಟ್ಟೆ ಬಳಿ ಗಾಂಜಾ ಮಾರಾಟ : ಮಾಲು ಸಹಿತ ಓರ್ವ ವಶ

27/11/2020

ಮಡಿಕೇರಿ ನ.27 : ನಾಪೋಕ್ಲು ಮಾರುಕಟ್ಟೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಾಪೋಕ್ಲು ಪೊಲೀಸರು ಬಂಧಿಸಿದ್ದಾರೆ.
ಠಾಣಾಧಿಕಾರಿ ಆರ್.ಕಿರಣ್ ಅವರಿಗೆ ಬಂದ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಪೊಲೀಸ್ ಸಿಬ್ಬಂದಿಗಳು ಆರೋಪಿ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳದ ನಿವಾಸಿ ಮಹಮ್ಮದ್ ತಾಹಿರ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿ ಆತನ ಬಳಿಯಿಂದ 74 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಮಡಿಕೇರಿ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ದಿನೇಶ್ ಕುಮಾರ್ ಹಾಗೂ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ನಾಪೋಕ್ಲು ಠಾಣಾಧಿಕಾರಿ ಆರ್.ಕಿರಣ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎ.ಎಸ್.ಐ ಕುಶಾಲಪ್ಪ, ಸಿಬ್ಬಂದಿಗಳಾದ ಮಧುಸೂದನ, ಎಂ.ಪಿ.ಜ್ಯೋತಿಕುಮಾರ, ನವೀನ್, ಮಹೇಶ್, ಹರ್ಷ ಹಾಗೂ ಗಿರೀಶ್ ಪಾಲ್ಗೊಂಡಿದ್ದರು.