ನ.29 ರಂದು ಕೊಡಗು ಜಿಲ್ಲೆಗೆ ಕಂದಾಯ ಸಚಿವರ ಭೇಟಿ

27/11/2020

ನ.29 ರಂದು ಕೊಡಗು ಜಿಲ್ಲೆಗೆ ಕಂದಾಯ ಸಚಿವರ ಭೇಟಿ
ಮಡಿಕೇರಿ : ಕಂದಾಯ ಸಚಿವರಾದ ಆರ್.ಅಶೋಕ್ ಅವರು ನ. 29 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಪೊನ್ನಂಪೇಟೆಯಲ್ಲಿ ನೂತನ ತಾಲೂಕು ಕೇಂದ್ರವನ್ನು ಉದ್ಘಾಟಿಸಲಿರುವ ಸಚಿವರು, ಬಳಿಕ 11.30 ಗಂಟೆಗೆ ಪೊನ್ನಂಪೇಟೆಯಲ್ಲಿ ನಡೆಯುವ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಆರ್.ಪ್ರಶಾಂತ್ ಅವರು ತಿಳಿಸಿದ್ದಾರೆ.