ಕೋವಿಡ್ ಸೋಂಕಿತರು ಅಗ್ನಿಗೆ ಬಲಿ

28/11/2020

ಗಾಂಧಿನಗರ ನ.27 : ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಐವರು ಕೊರೊನಾ ರೋಗಿಗಳು ದಾರುಣವಾಗಿ ಮೃತಪಟ್ಟ ಘಟನೆ ಗುಜರಾತ್ ನಲ್ಲಿ ನಡೆದಿದೆ. ರಾಜ್‍ಕೋಟ್‍ನ ಉದಯ ಶಿವಾನಂದ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸಿದ ಸಮಯದಲ್ಲಿ ಆಸ್ಪತ್ರೆಯಲ್ಲಿ 33 ಮಂದಿ ಕೊರೊನಾ ಸೋಂಕಿತರಿದ್ದರು.
ಈ ಪೈಕಿ ಐವರು ಅಗ್ನಿ ದುರಂತಕ್ಕೆ ತುತ್ತಾಗಿದ್ದಾರೆ ಘಟನೆ ನಡೆಯುತ್ತಿದ್ದಂತೆಯೇ ಮಾಹಿತಿ ಅರಿತ ಅಗ್ನಿಶಾಮದಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕಿಟಕಿ ಮೂಲಕ ಉಳಿದವರನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಅವರನ್ನು ಬೇರೊಂದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಘಟನೆ ಸಂಬಂಧ ತನಿಖೆ ನಡೆಸುವಂತೆ ಹಾಗೂ ಘಟನೆಗೆ ಕಾರಣವೇನು ಎಂಬುದನ್ನು ತಿಳಿದು ವರದಿ ನೀಡುವಂತೆ ಆದೇಶಿಸಿದ್ದಾರೆ.