ನ.29 ರಂದು ಆಹಾರ ಸಚಿವ ಕೆ.ಗೋಪಾಲಯ್ಯ ಕೊಡಗು ಜಿಲ್ಲಾ ಪ್ರವಾಸ

November 28, 2020

ಮಡಿಕೇರಿ ನ.28 : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವರಾದ ಕೆ.ಗೋಪಾಲಯ್ಯ ಅವರು ನವೆಂಬರ್, 29 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ನ. 29 ರಂದು ಬೆಳಗ್ಗೆ 9.30 ಗಂಟೆಗೆ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ. ನಂತರ 11 ಗಂಟೆಗೆ ಪೊನ್ನಂಪೇಟೆಯಲ್ಲಿ ನಡೆಯುವ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ವಿಶೇಷಾಧಿಕಾರಿ ಲಕ್ಷ್ಮಿ ನಾರಾಯಾಣ ಅವರು ತಿಳಿಸಿದ್ದಾರೆ.

error: Content is protected !!