ನ.29 ರಂದು ಪೌರಾಡಳಿತ ಸಚಿವ ಡಾ.ನಾರಾಯಣ ಗೌಡ ಕೊಡಗು ಜಿಲ್ಲಾ ಪ್ರವಾಸ

28/11/2020

ಮಡಿಕೇರಿ ನ.28 : ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವರಾದ ಡಾ.ನಾರಾಯಣ ಗೌಡ ಅವರು ನ.29 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ನ. 29 ರಂದು ಬೆಳಗ್ಗೆ 11 ಗಂಟೆಗೆ ಪೊನ್ನಂಪೇಟೆಯಲ್ಲಿ ನೂತನ ತಾಲ್ಲೂಕು ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೆಳಗ್ಗೆ 11.30 ಗಂಟೆಗೆ ಪೊನ್ನಂಪೇಟೆಯಲ್ಲಿ ನಡೆಯುವ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.