ಮರಾಠ ಅಭಿವೃದ್ಧಿ ನಿಗಮಕ್ಕೆ ವಿರೋಧ ಸರಿಯಲ್ಲ : ಕೊಡಗು ಮರಾಠ ಸಂಘ ಅಸಮಾಧಾನ

28/11/2020

ವಿರಾಜಪೇಟೆ ನ.28 : ಶತ ಶತಮಾನಗಳಿಂದ ಕನ್ನಡ ನಾಡಿನಲ್ಲೇ ಹುಟ್ಟಿ ಬೆಳೆದು ಜೀವನ ಸಾಗಿಸುತ್ತಿರುವ ಮರಾಠ ಸಮಾಜದ ಏಳಿಗೆಗಾಗಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸ್ವಾಗತಾರ್ಹ. ಆದರೆ ಸರ್ಕಾರದ ಈ ನಿರ್ಧಾರವನ್ನು ಕೆಲವು ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಾದ ಕ್ರಮವಲ್ಲವೆಂದು ಕೊಡಗು ಜಿಲ್ಲಾ ಮರಾಠಾ ಮಾರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷÀ ಎಂ.ಎಂ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಸಾಮರಸ್ಯದ ಜೀವನ ಸಾಗಿಸುತ್ತಿರುವವರ ನಡುವೆ ಹುಳಿ ಹಿಂಡಿ ಅಶಾಂತಿ ಮೂಡಿಸಲು ಯತ್ನಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.