Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:59 AM Friday 22-October 2021

ತಾಲ್ಲೂಕು ಘೋಷಣೆಗೆ ಕಾರಣಕರ್ತರಾದವರ ಕಡೆಗಣನೆ ಸರಿಯಲ್ಲ : ಕೊಡಗು ಜೆಡಿಎಸ್ ಅಸಮಾಧಾನ

28/11/2020

ಮಡಿಕೇರಿ ನ.28 : ನೂತನ ತಾಲ್ಲೂಕುಗಳ ಘೋಷಣೆಗೆ ಕಾರಣಕರ್ತರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಪೊನ್ನಂಪೇಟೆ ತಾಲ್ಲೂಕು ಕಾರ್ಯಕ್ರಮಕ್ಕೆ ಆಹ್ವಾನಿಸದೆ ಕಡೆಗಣಿಸಲಾಗಿದೆ ಎಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗಿನ ಪೊನ್ನಂಪೇಟೆ ಹಾಗೂ ಕುಶಾಲನಗರವನ್ನು ತಾಲ್ಲೂಕುಗಳನ್ನಾಗಿ ಘೋಷಿಸಬೇಕೆನ್ನುವ ಹೋರಾಟ ಕಳೆದ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಇಲ್ಲಿಯವರೆಗೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರ ಮಾಡಲಾಗದ ಕಾರ್ಯವನ್ನು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಡಿ ನೂತನ ತಾಲ್ಲೂಕುಗಳನ್ನು ಘೋಷಿಸಿದ್ದಾರೆ. ಆದರೆ ಇದೀಗ ಕೃತಜ್ಞತಾ ಪೂರ್ವಕವಾಗಿ ಅವರನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸುವ ಮೂಲಕ ಸನ್ಮಾನಿಸುವ ಮನೋಭಾವನೆಯನ್ನು ಪ್ರದರ್ಶಿಸದಿರುವುದು ಖಂಡನೀಯವೆಂದು ತಿಳಿಸಿದ್ದಾರೆ.
ಪ್ರತ್ಯೇಕ ತಾಲ್ಲೂಕು ಹೋರಾಟ ಸಮಿತಿ ಕೂಡ ಕುಮಾರಸ್ವಾಮಿಯವರನ್ನು ಸ್ಮರಿಸಿಕೊಳ್ಳದೇ ಇರುವುದು ದುರಂತವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿಗಾಗಿ ಹೋರಾಟಗಳು ನಡೆಯುತ್ತಿದ್ದಾಗ ಶಾಸಕರುಗಳೇ ಈ ಬೇಡಿಕೆಯನ್ನು ವಿರೋಧಿಸಿದ್ದರು. ಆದರೆ ಈಗ ಜನರ ಅಭಿಲಾಷೆ ನೆರವೇರಿದ ಬಳಿಕ ತಮ್ಮ ಸರ್ಕಾರದ ಪ್ರತಿನಿಧಿಗಳನ್ನು ಮಾತ್ರ ಆಹ್ವಾನಿಸಿ ಕ್ಷುಲ್ಲಕ ರಾಜಕಾರಣವನ್ನು ಪ್ರದರ್ಶಿಸಲಾಗುತ್ತಿದೆ. ಜನವಲಯದಲ್ಲೂ ಈ ಬಗ್ಗೆ ಟೀಕೆಗಳು ಕೇಳಿ ಬರುತ್ತಿದ್ದು, ಜಿಲ್ಲೆಗೆ ಅಪಾರ ನೆರವನ್ನು ನೀಡಿದ ಕುಮಾರಸ್ವಾಮಿ ಅವರ ಕಡೆಗಣನೆಯನ್ನು ಪ್ರಶ್ನಿಸಲಾಗುತ್ತಿದೆ.
2018 ರಲ್ಲಿ ಅತಿವೃಷ್ಟಿ ಹಾನಿಯಿಂದ ಅತಂತ್ರರಾದ ಸಂತ್ರಸ್ತರಿಗಾಗಿ 800 ಮನೆಗಳನ್ನು ನಿರ್ಮಿಸಿಕೊಟ್ಟಿರುವ ಅವರು ಪ್ರತ್ಯೇಕ ಕುಶಾಲನಗರ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳನ್ನು ಘೋಷಿಸಿ ಇತಿಹಾಸ ನಿರ್ಮಿಸಿದ್ದಾರೆ. ಈ ಮಹತ್ವದ ಘೋಷಣೆ ಇತಿಹಾಸದ ಪುಟಗಳಲ್ಲಿ ಹಾಗೇ ಉಳಿಯಲಿದ್ದು, ಗಮನಾರ್ಹ ನೆರವನ್ನು ನೀಡಿರುವ ಕುಮಾರಸ್ವಾಮಿ ಅವರನ್ನು ಪ್ರತಿಬಾರಿ ಕಡೆಗಣಿಸುತ್ತಿರುವುದು ಯಾವ ಕಾರಣಕ್ಕಾಗಿ ಎಂದು ಗಣೇಶ್ ಪ್ರಶ್ನಿಸಿದ್ದಾರೆ.