Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
5:01 AM Friday 22-October 2021

ನೂತನ ತಾಲ್ಲೂಕು ಪೊನ್ನಂಪೇಟೆಯಲ್ಲಿ ಕಾರ್ಯಾರಂಭ : ಮನೆ ಬಾಗಿಲಿಗೆ ಬರಲಿದೆ ವೃದ್ಧಾಪ್ಯ ವೇತನ : ಕಂದಾಯ ಸಚಿವ ಆರ್.ಅಶೋಕ್ ಭರವಸೆ

29/11/2020

ಮಡಿಕೇರಿ ನ.29 : ಜನರ ಬಳಿಗೆ ಸರ್ಕಾರದ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಕಂದಾಯ ಇಲಾಖೆಯಲ್ಲಿ ಮಹತ್ತರ ಯೋಜನೆ ರೂಪಿಸಿದ್ದು, ಆ ದಿಸೆಯಲ್ಲಿ ಅರ್ಜಿ ಸಲ್ಲಿಸದೆ ವೃದ್ಧಾಪ್ಯ ವೇತನವನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮವೂ ಇನ್ನೂ 15-20 ದಿನಗಳಲ್ಲಿ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವರಾದ ಆರ್ ಅಶೋಕ್ ಅವರು ತಿಳಿಸಿದ್ದಾರೆ.
ಕಂದಾಯ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ಪೊನ್ನಂಪೇಟೆಯಲ್ಲಿ ನೂತನ ತಾಲ್ಲೂಕು ಕಚೇರಿ ಉದ್ಘಾಟಿಸಿ ಸಚಿವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಹೊಂದಿದ್ದು, ಆ ದಿಸೆಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ತಾಲ್ಲೂಕು ಕಚೇರಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುತ್ತಾರೆ. ಅಂತಹ 60 ವರ್ಷ ಪೂರ್ಣಗೊಂಡವರ ಮನೆ ಬಾಗಿಲಿಗೆ ಬ್ಯಾಂಕ್ ಖಾತೆಯ ಮಾಹಿತಿ ಒದಗಿಸುವಂತೆ ತಾಲ್ಲೂಕು ಅಥವಾ ಜಿಲ್ಲಾಡಳಿತದಿಂದ ಪತ್ರ ಹೋಗಲಿದೆ, ನಂತರ ಅರ್ಜಿ ಸಲ್ಲಿಸದೆ ವೃದ್ದಾಪ್ಯ ವೇತನ ಪಡೆಯಬಹುದಾಗಿದೆ ಎಂದು ಕಂದಾಯ ಸಚಿವರು ವಿವರಿಸಿದರು.
ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಕ್ರಮವಹಿಸಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ರಾಜ್ಯದಲ್ಲಿ ಏಳುವರೆ ಸಾವಿರ ಕೋಟಿ ವಿನಿಯೋಗ ಮಾಡಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಅವರ ಪಿ.ಡಿ.ಖಾತೆಯಲ್ಲಿ 67 ಕೋಟಿ ರೂ ಹಣವಿದೆ. ಪ್ರಕೃತಿ ವಿಕೋಪ ಸಂದರ್ಭದಲ್ಲಿ 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜೊತೆಗೆ ಬೆಳೆಹಾನಿಯ ಪ್ರಥಮ ಹಾಗೂ ದ್ವಿತೀಯ ಹಂತದಲ್ಲಿ ಹಣ ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 9 ಸಾವಿರಕ್ಕೂ ಹೆಚ್ಚು ರೈತರಿಗೆ ಬೆಳೆಹಾನಿ ಪರಿಹಾರ ಪಾವತಿಸಲಾಗಿದೆ, ಪ್ರವಾಹ ಸಂದರ್ಭದಲ್ಲಿ ಗೃಹೋಪಯೊಗಿ ಕಳೆದುಕೊಂಡವರ ಪರಿಹಾರಕ್ಕಾಗಿ 50 ಲಕ್ಷ ರೂ ಬಿಡುಗಡೆ ಮಾಡಲಾಗಿದೆ, ಕೋವಿಡ್ ನಿರ್ವಹಣೆಗೆ 15 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಮಡಿಕೇರಿ ಮತ್ತು ವಿರಾಜಪೇಟೆ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಹಣ ಬಿಡುಗಡೆ, ಜಿಲ್ಲಾಡಳಿತ ತಡೆಗೋಡೆ ನಿರ್ಮಾಣ, ಹೀಗೆ ಜಿಲ್ಲೆಯ ಅಭಿವೃದ್ದಿ ಕಾರ್ಯಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿನ ಆರ್ಥಿಕ ಸಂಕಷ್ಟದ ನಡುವೆಯು ಸಹ ಹಲವು ಅಭಿವೃದ್ಧಿ ಕಾರ್ಯಗಳನ್ನು ಸರ್ಕಾರ ಕೈಗೊಂಡಿದೆ ಎಂದು ಆರ್.ಅಶೋಕ್ ಅವರು ಹೇಳಿದರು.
ಪೊನ್ನಂಪೇಟೆಯನ್ನು ತಾಲ್ಲೂಕು ಕೇಂದ್ರವನ್ನಾಗಿ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಪೊನ್ನಂಪೇಟೆ ನೂತನ ತಾಲ್ಲೂಕಿನ ಮೂಲ ಸೌಲಭ್ಯಕ್ಕೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ತಾಲ್ಲೂಕು ಆಡಳಿತಕ್ಕೆ 12 ಹುದ್ದೆಗಳಿಗೆ ಮಂಜೂರಾತಿ ನೀಡಲಾಗಿದ್ದು, 25 ಲಕ್ಷ ರೂ ಬಿಡುಗಡೆ ಮಾಡಲಾಗಿದೆ ಎಂದರು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಶ್ರೀಮಂಗಲ, ಹುದಿಕೇರಿ, ಬಾಳೆಲೆ ಹೋಬಳಿ ಸೇರಿದೆ, ತಾಲ್ಲೂಕಿನ ಭೌಗೋಳಿಕ ವಿಸ್ತೀರ್ಣ 1025 ಚದರ ಕೀ.ಮೀ ಆಗಿದ್ದು 1,01,157 ಜನಸಂಖ್ಯೆ ಹೊಂದಿದೆ. 49 ಗ್ರಾಮಗಳು ಸೇರಿದಂತೆ 21 ಗ್ರಾಮ ಪಂಚಾಯಿತಿ ಒಳಗೊಂಡಿದೆ, ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ, ರಾಮೇಶ್ವರ, ವೃಂತ್ಯುಂಜಯ ಹಾಗೂ ಕುಂದ ಬೆಟ್ಟ ಈಶ್ವರಿ ದೇವಸ್ಥಾನ, ಹಾಗೂ ಇರ್ಪು ಜಲಪಾತ ಸಚಿವರು ತಿಳಿಸಿದರು.
ಜನಸಾಮಾನ್ಯರಿಗೆ ಸರ್ಕಾರದ ಕಾರ್ಯಕ್ರಗಳು ಸುಗಮವಾಗಿ ತಲುಪಬೇಕು ಎಂಬ ಉದ್ದೇಶದಿಂದ ಹೊಸ ತಾಲ್ಲೂಕು ರಚನೆ ಮಾಡಲಾಗಿದೆ, ಈ ಭಾಗದ ಜನರ ಭಾವನೆಗೆ ಸರ್ಕಾರ ಸ್ಪಂದಿಸಿದೆ ಎಂದು ಸಚಿವರು ನುಡಿದರು.
ಈಗಾಗಲೇ ಪೌತಿ ಖಾತೆ ಆಂದೋಲನ ನಡೆಯುತ್ತಿದ್ದು, ಅರ್ಹರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಬೇಕು ಎಂದು ಸಚಿವರು ಹೇಳಿದರು.