ಕುಶಾಲನಗರ ತಾಲ್ಲೂಕು : ವಿಳಂಬಕ್ಕೆ ತಾಂತ್ರಿಕ ಅಡ್ಡಿ ಕಾರಣ : ಸಚಿವ ಆರ್.ಅಶೋಕ್ ಸ್ಪಷ್ಟನೆ

29/11/2020

ಮಡಿಕೇರಿ ನ.29 : ಪೊನ್ನಂಪೇಟೆಯಂತೆ ಕುಶಾಲನಗರ ತಾಲ್ಲೂಕು ಕೇಂದ್ರಕ್ಕೆ ಶೀಘ್ರ ಚಾಲನೆ ನೀಡಲಾಗುವುದು, ಕೆಲವು ತಾಂತ್ರಿಕ ತೊಂದರೆಯಿಂದಾಗಿ ಕುಶಾಲನಗರ ತಾಲ್ಲೂಕು ಅಸ್ತಿತ್ವಕ್ಕೆ ಬರಲು ವಿಳಂಬವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಪೊನ್ನಂಪೇಟೆಯಲ್ಲಿ ತಿಳಿಸಿದರು.
ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಪೊನ್ನಂಪೇಟೆಯನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡಬೇಕೆಂದು ಬಹಳ ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿತ್ತು. ಇದಕ್ಕೆ ಸರ್ಕಾರ ಸ್ಪಂದಿಸಿದೆ ಎಂದು ತಿಳಿಸಿದರು.
ನೂತನ ತಾಲ್ಲೂಕು ಕೇಂದ್ರಕ್ಕೆ ಅಗತ್ಯ ಮೂಲ ಸೌಲಭ್ಯ ಕಲ್ಪಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ಪೌತಿ ಖಾತೆ ಆಂದೋಲವನ್ನು ಅರ್ಹರಿಗೆ ತಲುಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಸಲಹೆ ಮಾಡಿದರು.
ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ ನಿರಂತರ ಹೋರಟದ ಫಲವಾಗಿ ಪೊನ್ನಂಪೇಟೆ ತಾಲ್ಲೂಕು ಕೇಂದ್ರವಾಗಿ ಅಸ್ತಿತ್ವಕ್ಕೆ ಬಂದಿದೆ, ಅದೇ ರೀತಿ ಕುಶಾಲನಗರ ತಾಲ್ಲೂಕು ಕೇಂದ್ರ ಅಸ್ತಿತ್ವಕ್ಕೆ ಬರಲಿದೆ. ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ ಎಂದು ಅವರು ಹೇಳಿದರು.

 ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ವಿರಾಜಪೇಟೆ ತಾ.ಪಂ.ಅಧ್ಯಕ್ಷರಾದ ಸ್ಮಿತಾ ಪ್ರಕಾಶ್, ಪೊನ್ನಂಪೇಟೆ ಗ್ರಾ.ಪಂ.ಅಧ್ಯಕ್ಷರಾದ ಎಂ.ಸುಮಿತ ಗಣೇಶ್, ವಿರಾಜಪೇಟೆ ತಹಶೀಲ್ದಾರ್ ಎಂ.ಎಲ್.ನಂದೀಶ್, ಪೊನ್ನಂಪೇಟೆ ತಹಶೀಲ್ದಾರ್ ಎ.ಎ.ಕುಸುಮ ಇತರರು ಇದ್ದರು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸ್ವಾಗಸಿದರು, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶ್ರೀನಿವಾಸ್ ವಂದಿಸಿದರು.