ಕೊಡಗಿನಲ್ಲಿ ಕೋವಿಡ್ : ಭಾನುವಾರ 6 ಪ್ರಕರಣ ಪತ್ತೆ

29/11/2020

ಮಡಿಕೇರಿ ನ.29 : ಜಿಲ್ಲೆಯಲ್ಲಿ ಭಾನುವಾರ 6 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಹಾಗೂ ರ್ಯಾಪಿಡ್ ಆಂಟಿಜನ್ ಪರೀಕ್ಷೆ ಮೂಲಕ ದೃಢಪಟ್ಟಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5321 ಆಗಿದ್ದು, 5174ಮಂದಿ ಗುಣಮುಖರಾಗಿದ್ದಾರೆ. 75 ಸಕ್ರಿಯ ಪ್ರಕರಣಗಳಿದ್ದು, 72 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 63 ಆಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮಡಿಕೇರಿ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಹಾಗೂ 1 ರ್ಯಾಪಿಡ್ ಆಂಟಿಜನ್ ಪರೀಕ್ಷೆ ಮೂಲಕ ದೃಢಪಟ್ಟಿದೆ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಹಾಗೂ 1 ರ್ಯಾಪಿಡ್ ಆಂಟಿಜನ್ ಪರೀಕ್ಷೆ ಮೂಲಕ ದೃಢಪಟ್ಟಿದೆ ದೃಢಪಟ್ಟಿದೆ.