ಗಡಿಯಲ್ಲಿ ಮತ್ತೆ ಪಾಕ್ ದಾಳಿ

30/11/2020

ಶ್ರೀನಗರ ನ.30 : ಇಂಡೋ-ಪಾಕ್ ಗಡಿ ಎಲ್ ಒಸಿಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ಮುಂದುವರೆದಿದ್ದು, ಮತ್ತೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.
ಗಡಿಯಲ್ಲಿನ ಭಾರತೀಯ ಸೇನೆಯ ಫಾರ್ವರ್ಡ್ ಪೋಸ್ಟ್ ಗಳು ಹಾಗೂ ಗಡಿಯಂಚಿನ ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕ್ ಸೇನೆ ದಾಳಿ ನಡೆಸಿದ್ದು, ಇದಕ್ಕೆ ಭಾರತೀಯ ಸೇನೆ ಕೂಡ ಪ್ರತಿದಾಳಿ ನಡೆಸಿವೆ.
ಕಥುವಾ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಗಡಿ ಸಮೀಪದ ಹೀರಾನಗರ ಸೆಕ್ಟರ್ ವ್ಯಾಪ್ತಿಯ ಪನ್ಸಾರ್, ಮನ್ಯಾರಿ ಹಾಗೂ ಕರೋಲ್‍ಕೃಷ್ಣಾ ಪ್ರದೇಶಗಳಲ್ಲಿ ಪಾಕಿಸ್ತಾನದ ಪಡೆಗಳು ಗುಂಡಿನ ದಾಳಿ ಆರಂಭಿಸಿದವು. ಗಡಿ ಭದ್ರತಾ ಪಡೆಯ ಯೋಧರು ಪ್ರತಿ ದಾಳಿ ನಡೆಸಿ, ತಕ್ಕ ಉತ್ತರ ನೀಡಿದ್ದಾರೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಪಾಕಿಸ್ತಾನ ನಡೆಸಿದ ದಾಳಿಯಿಂದಾಗಿ ಗ್ರಾಮದ 12ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದೂ ಅಧಿಕಾರಿಗಳು ಹೇಳಿದರು.