ಪತ್ರಕರ್ತ ಪುತ್ತರಿರ ಕರುಣ್‍ಕಾಳಯ್ಯರಿಗೆ ಸನ್ಮಾನ

November 30, 2020

ಮಡಿಕೇರಿ ನ. 30 : ಚೆಟ್ಟಳ್ಳಿಯ ಪುತ್ತರಿರ ಕುಟುಂಬಸ್ಥರು ಪತ್ರಕರ್ತ ಪುತ್ತರಿರ ಕರುಣ್‍ಕಾಳಯ್ಯರನ್ನು ಐನ್‍ಮನೆಯಲ್ಲಿ ಸನ್ಮಾಸಿ ಗೌರವಿಸಿದರು.
ಪತ್ರಿಕಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪುತ್ತರಿರ ಕರುಣ್‍ಕಾಳಯ್ಯ ಸಂಘದ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರ ಪತ್ರಿಕಾ ರಂಗದ ಸೇವೆಯನ್ನು ಪರಿಗಣಿಸಿ ಹಿರಿಯರು ಶಾಲುಹೊದಿಸಿ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು.
ನಿವೃತ್ತ ಸೇನಾಧಿಕಾರಿ ಪುತ್ತರಿರ ಗಣೇಶ್ ಭೀಮಯ್ಯ ಮಾತನಾಡಿ, ಕುಟುಂಬದ ಸದಸ್ಯರು ಒಗ್ಗಟಿನಿಂದ ಮುನ್ನಡೆಯಬೇಕು ಮತ್ತು ಸಾಧಕರನ್ನು ಗುರುತಿಸಿ ಸನ್ಮಾನಿಸಬೇಕೆಂದು ಹೇಳಿದರು.
ಸರಳ ಕಾರ್ಯಕ್ರಮದಲ್ಲಿ ಪತ್ರಿಕಾ ಕ್ಷೇತ್ರ ಹಾಗೂ ಸಾರ್ವಜನಿಕ ವಲಯದಲ್ಲಿ ಸೇವೆಸಲ್ಲಿಸುತ್ತಿರುವ ಪುತ್ತರಿರ ಪಪ್ಪುತಿಮ್ಮಯ್ಯ ಅವರಿಗೂ ಅಭಿನಂದನೆ ಸಲ್ಲಿಸಲಾಯಿತು.

error: Content is protected !!