ಡಿ. 4 ರಂದು ಜೆಡಿಎಸ್ ಯುವ ಕಾರ್ಯಕರ್ತರ ಸಭೆ

30/11/2020

ಮಡಿಕೇರಿ ನ. 30 : ರಾಜ್ಯದಲ್ಲಿ ಗ್ರಾ.ಪಂ. ಚುನಾವಣೆಯ ದಿನಾಂಕ ಪ್ರಕಟವಾದ ಹಿನ್ನೆಲೆ ಕೊಡಗು ಜಿಲ್ಲಾ ಜಾತ್ಯಾತೀತ ಜನತಾ ದಳದ ಯುವ ಘಟಕದಿಂದ ಡಿ. 4 ರಂದು ಯುವ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಯುವ ಜೆಡಿಎಸ್‍ನ ಪ್ರಧಾನ ಕಾರ್ಯದರ್ಶಿ ಜಾಶಿರ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಗ್ರಾ.ಪಂ. ಚುನಾವಣೆಯಲ್ಲಿ ಯುವಕರಿಗೆ ಹೆಚ್ಚಿನ ಮನ್ನಣೆ ನೀಡುವ ನಿಟ್ಟಿನಲ್ಲಿ ಯುವ ಜೆಡಿಎಸ್‍ನ ಜಿಲ್ಲಾಧ್ಯಕ್ಷ ಸಿ. ಎಲ್. ವಿಶ್ವ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ಸಭೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಪಾಲ್ಗೊಳ್ಳಲಿದ್ದಾರೆ ಎಂದರು.
ಪಂಚಾಯಿತಿ ಟಿಕೆಟ್ ಆಕಾಂಕ್ಷಿಗಳು ಮತ್ತು ಜಿಲ್ಲಾ ತಾಲೂಕು ಹಾಗೂ ಹೋಬಳಿ ಮಟ್ಟದ ಪದಾಧಿಕಾರಿಗಳು ಸಭೆಗೆ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಜಾಶಿರ್ ಮನವಿ ಮಾಡಿದ್ದಾರೆ.