ಮಾಯಮುಡಿಯಲ್ಲಿ ಡಿ.3 ರಂದು ‘ಪುತ್ತರಿ ಮಂದ್ ನಮ್ಮೆ’

30/11/2020

ಮಡಿಕೇರಿ ನ.30 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಮಾನಿಲ್ ಅಯ್ಯಪ್ಪ ಸೇವಾ ಸಮಿತಿ ಮತ್ತು ಮಾಯಮುಡಿ ಮಾನಿಲ್ ಕೊಡವ ಕೂಟ ದೊಡ್ಡಮಾಡ್ ಇವರ ಸಹಯೋಗದಲ್ಲಿ ಕಂಗಳತ್‍ನಾಡ್‍ರ ಕೂಟತ್ ಮಾವು ಮಂದ್ ಕೋಲುಬಾಣೆ, ಮಾಯಮುಡಿ ಇಲ್ಲಿ ‘ಪುತ್ತರಿ ಮಂದ್ ನಮ್ಮೆ-2020’ಯು ಡಿಸೆಂಬರ್, 03 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾವೇರಿ ಅಸೋಸಿಯೇಷನ್‍ನ ಅಧ್ಯಕ್ಷರಾದ ಕಾಳಪಂಡ ಸಿ.ಸುಧೀರ್ ಇವರು ಉದ್ಘಾಟನೆ ಮಾಡಲಿದ್ದಾರೆ. ಗೌರವ ಉಪಸ್ಥಿತರಾಗಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಾಜಿ ಅಧ್ಯಕ್ಷರು ಚಿರಿಯಪಂಡ ರಾಜಾ ನಂಜಪ್ಪ ಅವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಫಿ ಬೆಳೆಗಾರಾದ ಚೆಪ್ಪುಡಿರ ಕಿಟ್ಟು ಅಯ್ಯಪ್ಪ, ಮಾಯಮುಡಿ ಮಹಿಳಾ ಸಮಾಜದ ಅಧ್ಯಕ್ಷರಾದ ಚೆಪ್ಪುಡಿರ ರಾಧಾ ಅಚ್ಚಯ್ಯ, ವಿರಾಜಪೇಟೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಅಮ್ಮತ್ತಿರ ರೇವತಿ ಪರಮೇಶ್ವರ ಅವರು ಭಾಗವಹಿಸಲಿದ್ದಾರೆ.
ನಂತರ ನಡೆಯುವ ಕಾರ್ಯಕ್ರಮದಲ್ಲಿ ‘ಪುತ್ತರಿ ನಮ್ಮೆ-ಮಂದ್ ಮಾನಿರಬೀರ್ಯ’ ಎಂಬ ವಿಷಯದ ಬಗ್ಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಮಾದೇಟಿರ ಬೆಳ್ಯಪ್ಪ ಅವರು ವಿಚಾರ ಮಂಡನೆಯನ್ನು ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕ ಮತ್ತು ಸಿ.ಡಿ.ಗಳ ಪ್ರದರ್ಶನ ಮತ್ತು ಮಾರಾಟ ಇರುತ್ತದೆ. ಸರ್ಕಾರದ ಮಾರ್ಗಸೂಚಿಯಂತೆ ಈ ಕಾರ್ಯಕ್ರಮವನ್ನು ನಡೆಸಲಾಗುವುದು.