ಕೊಡಗಿನಲ್ಲಿ ಕೋವಿಡ್ : ಸೋಮವಾರ 13 ಪ್ರಕರಣ ಪತ್ತೆ

30/11/2020

ಮಡಿಕೇರಿ ನ.30 : ಜಿಲ್ಲೆಯಲ್ಲಿ ಸೋಮವಾರ 13 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5334 ಆಗಿದ್ದು, 5181 ಮಂದಿ ಗುಣಮುಖರಾಗಿದ್ದಾರೆ. 80 ಸಕ್ರಿಯ ಪ್ರಕರಣಗಳಿದ್ದು, 73 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 62 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
8 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 5 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 01 ಹೊಸ ಕೋವಿಡ್-19 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 04 ರ್ಯಾಪಿಡ್ ಆಂಟಿಜನ್ ಪರೀಕ್ಷೆ ಮೂಲಕ ದೃಢಪಟ್ಟಿದೆ.