ಗ್ರಾ. ಪಂ. ಚುನಾವಣೆ : ಕುಶಾಲನಗರ ಬ್ಲಾಕ್ ಕಾಂಗ್ರೆಸ್‍ನಿಂದ ವಿವಿಧ ವಲಯಗಳಲ್ಲಿ ಪೂರ್ವ ಸಿದ್ಧತಾ ಸಭೆ

01/12/2020

ಮಡಿಕೇರಿ ಡಿ. 1 : ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿವಿಧ ಬ್ಲಾಕ್‍ಗಳಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

7ನೇ ಹೊಸಕೋಟೆಯಲ್ಲಿ ವಲಯ ಅಧ್ಯಕ್ಷ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನಂತರ ಸುಂಟಿಕೊಪ್ಪ ವಲಯ, ಗುಡ್ಡೆಹೊಸೂರು ವಲಯದಲ್ಲಿ ಸಭೆಯಲ್ಲಿ ಪಕ್ಷದ ಪ್ರಮುಖರು ಚುನಾವಣೆಯ ಪೂರ್ವ ಸಿದ್ಧತೆಯ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಕೆಪಿಸಿಸಿ ವಕ್ತಾರ ಚಂದ್ರಮೌಳಿ, ಕೆಪಿಸಿಸಿ ಸಂಯೋಜಕ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಪ್ರದೀಪ್ ರೈ ಪಂಬಾರು, ಜಿ.ಪಂ ಸದಸ್ಯೆ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಸುನೀತಾ, ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿ ರವಿ ಅಜ್ಜಳ್ಳಿ, ಐಎನ್‍ಟಿಯುಸಿ ಜಿಲ್ಲಾಧ್ಯಕ್ಷ ಗೋವಿಂದರಾಜ್ ದಾಸ್, ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ಅನಂತಕುಮಾರ್, ಪ್ರಧಾನ ಕಾರ್ಯದರ್ಶಿ ಜೆ. ಎಲ್. ಜನಾರ್ಧನ, ನಗರ ಕಾಂಗ್ರೆಸ್ ಅಧ್ಯಕ್ಷ ಶರೀಫ್, 7ನೇ ಹೊಸಕೋಟೆ ಗ್ರಾ.ಪಂ ಮಾಜಿ ಅಧ್ಯಕ್ಷರಾದ ಲತಾ ಬಸವರಾಜು, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎನ್.ಹೂವಯ್ಯ, ಪ.ಪಂ ದ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಆರ್ ಚಂದ್ರು, ಯುವ ಕಾಂಗ್ರೆಸ್ ಮುಖಂಡ ದೇವಪ್ಪ, ಕೂಡುಮಂಗಳೂರು ವಲಯ ಅಧ್ಯಕ್ಷ ಶೈಲೇಶ್, ಜಿಲ್ಲಾ ಎಸ್‍ಟಿ ಘಟಕದ ಅಧ್ಯಕ್ಷೆ ಹಾಗೂ ಜಿ.ಪಂ ಸದಸ್ಯೆ ಪಂಕಜ, ಕೊಡಗು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾದ ಗೀತಾಧರ್ಮಪ್ಪ, ಅಲ್ಪಸಂಖ್ಯಾತ ಘಟಕದ ಸುಂಟಿಕೊಪ್ಪ ವಲಯ ಅಧ್ಯಕ್ಷ ಆಲಿಕುಟ್ಟಿ, ಸೆಬಾಸ್ಟಿನ್, ಹಿರಿಯ ಕಾಂಗ್ರೆಸ್ಸಿಗ ಪೆಮ್ಮಯ್ಯ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸುನಿಲ್ ಹಾಗೂ 7ನೇ ಹೊಸಕೋಟೆ ವಲಯ ವ್ಯಾಪ್ತಿಯ ಗ್ರಾ.ಪಂ ಮಾಜಿ ಸದಸ್ಯರು, ಸ್ಥಳೀಯ ಕಾಂಗ್ರೆಸ್ ಮುಖಂಡ ಕುಞ ಕುಟ್ಟಿ ಹಾಗೂ ಕಾರ್ಯಕರ್ತರು ಹಾಜರಿದ್ದರು.