ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 5344

December 1, 2020

ಮಡಿಕೇರಿ ಡಿ. 1 : ಜಿಲ್ಲೆಯಲ್ಲಿ ಮಂಗಳವಾರ 10 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
8 ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5344 ಆಗಿದ್ದು, 5190 ಮಂದಿ ಗುಣಮುಖರಾಗಿದ್ದಾರೆ. 81
ಸಕ್ರಿಯ ಪ್ರಕರಣಗಳಿದ್ದು, 73 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 59 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!