ಗ್ರಾ.ಪಂ. ಚುನಾವಣೆ : ಕೊಡಗು ಕಾಂಗ್ರೆಸ್‍ನಿಂದ ಡಿ. 2 ರಂದು ಚುನಾವಣಾ ಪೂರ್ವ ಸಿದ್ಧತಾ ಸಭೆ

01/12/2020

ಮಡಿಕೇರಿ ಡಿ. 1 : ರಾಜ್ಯದಲ್ಲಿ ಗ್ರಾ.ಪಂ ಚುನಾವಣೆ ಘೋಷಣೆ ಆಗಿರುವುದರ ಹಿನ್ನೆಲೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಡಿ. 2 ರಂದು ಚುನಾವಣಾ ಪೂರ್ವ ಸಿದ್ಧತಾ ಸಭೆ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಭೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಎಲ್ಲಾ ಜಿ.ಪಂ ಸದಸ್ಯರು, ಗ್ರಾ.ಪಂ ಚುನಾವಣೆಯ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಉಸ್ತುವಾರಿಗಳು ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.