ಅಕ್ರಮ ಮದ್ಯ ಮಾರಾಟ : ಬಜೆಗುಂಡಿಯಲ್ಲಿ ಆರೋಪಿ ಬಂಧನ

01/12/2020

ಸೋಮವಾರಪೇಟೆ ಡಿ.1 : ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸೋಮವಾರಪೇಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪದ್ಮನಾಭ ಬಂಧಿತ ಆರೋಪಿ.
ಬಜೆಗುಂಡಿಯ ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಸಂದರ್ಭ ಆರೋಪಿಯನ್ನು ಬಂಧಿಸಿ, 6.5ಲೀ ಮದ್ಯವನ್ನು ವಶಪಡಿಸಿಕೊಂಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.