ಬಿಜೆಪಿಗರ ವಿರುದ್ಧ ವಿಶ್ವನಾಥ್ ಮುನಿಸು

02/12/2020

ಬೆಂಗಳೂರು ಡಿ.2 : ಹುಣಸೂರು ಉಪ ಚುನಾವಣೆಯಲ್ಲಿ ನನ್ನ ಸೋಲಿಗೆ ಸಿ.ಪಿ.ಯೋಗೀಶ್ವರ್ ಹಾಗೂ ಎನ್.ಆರ್.ಸಂತೋಷ್ ಕಾರಣವೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಶಾಸಕರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಣಸೂರು ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದಿಂದ ಚುನಾವಣಾ ಖರ್ಚಿಗಾಗಿ ನೀಡಿದ ದೊಡ್ಡಮಟ್ಟದ ಹಣವನ್ನು ಸಿ.ಪಿ. ಯೋಗೀಶ್ವರ್ ಹಾಗೂ ಎನ್.ಆರ್ ಸಂತೋಷ್ ಲಪಟಾಯಿಸಿದರು.
ಉಪ ಚುನಾವಣೆ ಅಭ್ಯರ್ಥಿ ಘೋಷಣೆಗೂ ಮುನ್ನವೇ ತಾನೆ ಅಭ್ಯರ್ಥಿ ಎಂದು ಎಲ್ಲೆಡೆ ಫ್ಲೆಕ್, ಬ್ಯಾನರ್ ಹಾಕಿಹೊಂಡು ಪ್ರಚಾರ ಮಾಡಿದರು. ಸೀರೆ, ಕುಕ್ಕರ್ ನೀಡಿದರು. ಅದರೂ ಸಹ ಬಹಿರಂಗವಾಗಿಯೇ ನಡೆಸಿ ಸಿಕ್ಕಿಬಿದ್ದರು. ಮಾಧ್ಯಮಗಳಲ್ಲಿಯೂ ಇದು ಭಾರೀ ಸುದ್ದಿಯಾಗಿತ್ತು. ಹೀಗಾಗಿ ನನ್ನ ಸೋಲಿಗೆ ಇದೂ ಕಾರಣವಾಗಿದೆ. ಅಂತಹವರನ್ನು ಮುಖ್ಯಮಂತ್ರಿಯವರು ಮಂತ್ರಿ ಮಾಡುತ್ತೇನೆ ಎಂದು ಹೇಳಿಕೆ ನೀಡಿದರೆ ಹೇಗೆ ಎಂದು ಪ್ರಶ್ನಿಸಿದರು. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಲಿಖಿತವಾಗಿ ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ನನಗೆ ತುಂಬಾ ಬೇಸರವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.