ಸಿನಿಮೋತ್ಸವಕ್ಕೆ ಅನುಮತಿ ಕೇಳಿದ ಅಕಾಡೆಮಿ

December 2, 2020

ಬೆಂಗಳೂರು ಡಿ.2 : ಮುಂದಿನ ವರ್ಷ 2021ರ ಫೆಬ್ರವರಿ 3 ಅಥವಾ 4 ನೇ ವಾರದಲ್ಲಿ ಸಿನಿಮೋತ್ಸವವನ್ನು ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ಅವರ ನೇತೃತ್ವದ ನಿಯೋಗ ಮಾಡಿದ ಮನವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಂದಿಸಿದ್ದಾರೆ.
ಸುನಿಲ್ ಪುರಾಣಿಕ್ ನೇತೃತ್ವದ ನಿಯೋಗ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, 3ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕೋರಿದೆ.
ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ ಸತತ ಕಳೆದ 12 ವರ್ಷಗಳ ಕಾಲ ಯಶಸ್ಸನ್ನು ಕಂಡಿದೆ. ವಿಶ್ವದಲ್ಲಿ 5000 ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಆದರೆ, ಅವುಗಳಲ್ಲಿ ಕೇವಲ 45 ಚಲನಚಿತ್ರೋತ್ಸವಗಳಿಗೆ ಅಂತರಾಷ್ಟ್ರೀಯ ಮಾನ್ಯತೆ ದೊರೆತಿದೆ. ಇದೀಗ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಅಂತರಾಷ್ಟ್ರೀಯ ಮಾನ್ಯತೆ ದೊರೆಯುವ ಲಕ್ಷಣಗಳು ಗೋಚರಿಸುತ್ತಿವೆ. ಒಂದು ವೇಳೆ ಮಾನ್ಯತೆ ದೊರೆತರೆ ಇದು ವಿಶ್ವದಲ್ಲಿ 46ನೇ ಮಾನ್ಯತೆ ಪಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

error: Content is protected !!