ಕೊಡಗಿನಲ್ಲಿ ಕೋವಿಡ್ : ಸೋಂಕಿತರ ಸಂಖ್ಯೆ 5349

02/12/2020

ಮಡಿಕೇರಿ ಡಿ.2 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 5 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5349 ಆಗಿದ್ದು, 5197 ಮಂದಿ ಗುಣಮುಖರಾಗಿದ್ದಾರೆ. 79
ಸಕ್ರಿಯ ಪ್ರಕರಣಗಳಿದ್ದು, 73 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 58 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.