ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಪತ್ರಕರ್ತೆ ರಜಿತ ಕಾರ್ಯಪ್ಪ ನೇಮಕ

02/12/2020

ಮಡಿಕೇರಿ : ಡಿ 2: ಕನ್ನಡ ಅಭಿವೃದ್ದಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರಕಾರದ ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಜಿಲ್ಲಾ ಮಟ್ಟದಲ್ಲಿ ರಚಿಸಿರುವ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಉಲ್ಲೇಖ(1)ರ ಸರಕಾರದ ಆದೇಶಾನುಸಾರ ವಿರಾಜಪೇಟೆಯ ಸಾಹಿತಿ, ಕವಿಗಳಾದ ಬಡಕಡ ರಜಿತ ಕಾರ್ಯಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಬೆಂಗಳೂರು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳಿಧರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕವಿ, ಸಾಹಿತಿ, ಪತ್ರಕರ್ತರಾಗಿರುವ ರಜಿತ ಕಾರ್ಯಪ್ಪ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕರಾಗಿ, ವಿರಾಜಪೇಟೆ ಜಾನಪದ ಪರಿಷತ್ ಘಟಕದ ಪ್ರಧಾನ ಕಾರ್ಯದರ್ಶೀಗಳಾಗಿ, ಹಲವಾರು ಸಂಘ ಸಂಸ್ಥೆಗಳ ನಿರ್ದೇಶಕಿಯಾಗಿ, ಸಾಹಿತ್ಯ ಹಾಗೂ ಸಾಂಸ್ಕøತಿಕ ಸಂಸ್ಥೆಗಳ ಸದಸ್ಯರಾಗಿ ಸಾಹಿತ್ಯ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿದ್ದಾರೆ. ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿರುವ ಇವರು ಕನ್ನಡದಲ್ಲಿ 8 ಕೃತಿಗಳನ್ನು ಹೊರತಂದಿದ್ದಾರೆ.