Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
9:49 PM Sunday 17-October 2021

ಮಡಿಕೇರಿಯಲ್ಲಿ ವಿಶ್ವ ಏಡ್ಸ್ ದಿನ ಆಚರಣೆ : ಎಚ್‍ಐವಿ ಸೋಂಕು ತಡೆಯುವಲ್ಲಿ ಜಾಗೃತಿ ಅಗತ್ಯ : ನ್ಯಾಯಾಧೀಶ ಲಗಮಪ್ಪ ಅಭಿಪ್ರಾಯ

02/12/2020

ಮಡಿಕೇರಿ ಡಿ.2 : ಎಚ್‍ಐವಿ ಸೋಂಕು ತಡೆಯುವಲ್ಲಿ ಪ್ರತಿಯೊಬ್ಬರಲ್ಲಿಯೂ ಜಾಗೃತಿ ಇರಬೇಕು. ಈ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ ಎಂದು ಪ್ರದಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿನರಾಳಕರ್ ಭೀಮರಾವ್ ಲಗಮಪ್ಪ ಅವರು ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ರೋಟರಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ರೋಟರಿ ಸಭಾಂಗಣದಲ್ಲಿ ‘ಎಚ್‍ಐವಿ ಸೋಂಕಿನ ತಡೆಗಾಗಿ ಜಾಗತಿಕ ಒಗ್ಗಟ್ಟು ಹಾಗೂ ಜವಾಬ್ದಾರಿ ಹಂಚಿಕೆ’ ಎಂಬ ಘೋಷಣೆಯೊಂದಿಗೆ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಎಚ್‍ಐವಿ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ ತೊಂದರೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಅಗತ್ಯ ಎಂದು ಅವರು ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ ಅವರು ಮಾತನಾಡಿ ಎಚ್‍ಐವಿ/ ಏಡ್ಸ್ ರೋಗ ನಿರೋಧಕ ಶಕ್ತಿಯನ್ನು ಕುಂದಿಸುತ್ತದೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.
ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎನ್.ಆನಂದ್ ಅವರು ಎಚ್‍ಐವಿ ಸೋಂಕಿನ ಕುರಿತು ಮಾಹಿತಿ ನೀಡಿ ಎಚ್‍ಐವಿ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಡಿಸೆಂಬರ್ 1 ರಂದು ರಾಷ್ಟ್ರಾದ್ಯಾಂತ ವಿಶ್ವ ಏಡ್ಸ್ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪ್ರತೀ ವóರ್ಷ ಈ ದಿನವನ್ನು ಒಂದೊಂದು ಘೋಷಾ ವಾಕ್ಯದೊಂದಿಗೆ ಪ್ರಾರಂಭಿಸಲಾಗುತ್ತದೆ ಎಂದರು.
ಪ್ರಸಕ್ತ ವರ್ಷ ಎಚ್.ಐ.ವಿ/ ಏಡ್ಸ್ ಸೋಂಕಿತರಿಗೆ ಅಗತ್ಯವಾದ ಸೇವೆಗಳು ಹಾಗೂ ಸೌಲಭ್ಯಗಳನ್ನು ಸೂಕ್ತವಾಗಿ ಒದಗಿಸುವ ನಿಟ್ಟಿನಲ್ಲಿ ಸೋಂಕಿತರಿಗೆ ಕಳಂಕ ಹಾಗೂ ತಾರತಮ್ಯದ ವಿರುದ್ಧ ರಕ್ಷಣೆ ಕೊಡಬಹುದಾದ ಮಾನವ ಹಕ್ಕುಗಳ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವ ಅವಕಾಶ ಕಲ್ಪಿಸಲಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ರೋಟರಿ ಸಂಸ್ಥೆಯ ಅಧ್ಯಕ್ಷರಾದ ಪಿ.ಟಿ.ಗಣಪತಿ, ಲಯನ್ಸ್ ಸಂಸ್ಥೆಯ ಅಧ್ಯಕ್ಷರಾದ ಅನಿತ ಸೋಮಣ್ಣ, ಸ್ನೇಹಾಶ್ರಯ ಸಮಿತಿಯ ಅಧ್ಯಕ್ಷರಾದ ಕೆ.ಟಿ.ಬೇಬಿಮ್ಯಾಥ್ಯು, ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಕವಿತ ಬೊಳ್ಳಪ್ಪ ಅವರು ಹಾಜರಿದ್ದರು.
ಸನ್ಮಾನ; ಜಿಲ್ಲೆಯಲ್ಲಿ ಎಚ್.ಐ.ವಿ/ಏಡ್ಸ್ ನಿಯಂತ್ರಣ ಹಾಗೂ ತಡೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಸಂಘ ಸಂಸ್ಥೆಗಳು, ರೆಡ್ ರಿಬ್ಬನ್ ಕಾಲೇಜುಗಳು, ಅತಿ ಹೆಚ್ಚು ರಕ್ತದಾನ ಮಾಡಿದ ರಕ್ತದಾನಿಗಳು, ಐ.ಸಿ.ಟಿ.ಸಿ ಕೇಂದ್ರ, ರಕ್ತನಿಧಿ ಕೇಂದ್ರ, ಏ.ಆರ್.ಟಿ ಕೇಂದ್ರ ಹಾಗೂ ಆರೈಕೆ ಮತ್ತು ಬೆಂಬಲ ಕೇಂದ್ರಗಳಿಗೆ ಸನ್ಮಾನಿಸಲಾಯಿತು.
ಸನ್ಮಾನ ಮಾಡಿದವರ ವಿವರ: ಅತ್ಯುತ್ತಮ ಸಂಘ ಸಂಸ್ಥೆಗಳು. ಲಯನ್ಸ್ ಸಂಸ್ಥೆ ಮಡಿಕೇರಿ, ರೋಟರಿ ಸಂಸ್ಥೆ ಮಡಿಕೇರಿ, ಒ.ಡಿ.ಪಿ ಸ್ನೇಹಾಶ್ರಯ ಸಮಿತಿ
ಅತ್ಯುತ್ತಮ ರೆಡ್ ರಿಬ್ಬನ್ ಕಾಲೇಜು: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಪ್ರಥಮ ದರ್ಜೆ ಕಾಲೇಜು ಹಾಗೂ ವಿರಾಜಪೇಟೆ ಕಾವೇರಿ ಕಾಲೇಜು.
ಅತೀ ಹೆಚ್ಚು ರಕ್ತದಾನ ಮಾಡಿದ ದಾನಿಗಳು. ಸತೀಶ್ ಎ. ಎ.ಪಾಸಿಟಿವ್-38 ಬಾರಿ ರಕ್ತದಾನ, ಮಂಜೇಸ್ ಎ.ಪಾಸಿಟಿವ್-25 ಬಾರಿ ರಕ್ತದಾನ. ಸುಮಿತ. ಒ.ಪಾಸಿಟಿವ್-02 ಬಾರಿ ರಕ್ತದಾನ ಮಾಡಿದ್ದು ಇವರನ್ನು ಗೌರವಿಸಲಾಯಿತು.
ಅತ್ಯುತ್ತಮ ಕಾರ್ಯನಿರ್ವಹಿಸಿದ ಜಿಲ್ಲೆಯ ಐಸಿಟಿಸಿ/ ಎಆರ್‍ಟಿ/ರಕ್ತ ನಿಧಿ/ ಆರೈಕೆ ಮತ್ತು ಬೆಂಬಲ ಕೇಂದ್ರ. ಐಸಿಟಿಸಿ ಸಮುದಾಯ ಆರೋಗ್ಯ ಕೇಂದ್ರ-ಗೋಣಿಕೊಪ್ಪ, ಐಸಿಟಿಸಿ ಸಾರ್ವಜನಿಕ ಆಸ್ಪತ್ರೆ, ಸೋಮವಾರಪೇಟೆ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ, ಮಡಿಕೇರಿ, ಎಆರ್‍ಟಿ. ಕೇಂದ್ರ ಜಿಲ್ಲಾ ಆಸ್ಪತ್ರೆ, ವಿಹಾನ್-ಆರೈಕೆ ಮತ್ತು ಬೆಂಬಲ ಕೇಂದ್ರ.
ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಕಮಲ ಪ್ರಾರ್ಥಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕರಾದ ಸುನೀತ ಮುತ್ತಣ್ಣ ಸ್ವಾಗತಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಅಧಿಕಾರಿ ಜಯಪ್ಪ ಅವರು ನಿರೂಪಿಸಿದರು. ಐಸಿಟಿಸಿ ಕೇಂದ್ರದ ಆಪ್ತ ಸಮಾಲೋಚಕರಾದ ಅನಿತಾ ಕುಮಾರಿ ಅವರು ವಂದಿಸಿದರು.