ರಕ್ಷಣೆ ಕೋರಿದ ಮಾಜಿ ಸಚಿವ ವರ್ತೂರು

03/12/2020

ಬೆಂಗಳೂರು ಡಿ.3 : ದುಷ್ಕರ್ಮಿಗಳಿಂದ ಅಪಹರಣಕ್ಕೆ ಒಳಲಾಗಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಘಟನೆಯ ಬಗ್ಗೆ ವಿಸ್ತೃತವಾಗಿ ವಿವರಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಕುಟುಂಬಕ್ಕೆ ಜೀವ ಬೆದರಿಕೆಯಿದ್ದು, ತಮಗೆ ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸಬೇಕು ಎಂದು ಗೃಹ ಸಚಿವರಲ್ಲಿ ಮನವಿ ಮಾಡಿದ್ದೇನೆ. ಪ್ರಕರಣ ನಡೆದ ಬಗ್ಗೆ ಅವರಿಗೆ ವಿವರಿಸಿದ್ದೇನೆ, ತಮಗೆ ಹಾಗೂ ಮಕ್ಕಳಿಗೆ ರಕ್ಷಣೆ ಬೇಕು ಎಂದು ಕೇಳಿದ್ದೇನೆ ಎಂದು ತಿಳಿಸಿದರು.
ಈ ನಡುವೆ ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣವನ್ನು ಭೇದಿಸಲು ವೈಟ್ ಫೀಲ್ಡ್ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ವಿಶೇಷ ಪೆÇಲೀಸ್ ತಂಡಗಳನ್ನು ರಚಿಸಲಾಗಿದೆ.