ಬ್ರಿಟನ್ ಪ್ರಧಾನಿ ಗಣರಾಜ್ಯ ದಿನದ ಅತಿಥಿ

December 3, 2020

ನವದೆಹಲಿ ಡಿ.3 : ಭಾರತ 2021ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಆಹ್ವಾನ ನೀಡಿದೆ.
ನ.27ರಂದು ನಡೆದಿರುವ ದೂರವಾಣಿ ಮಾತುಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೋರಿಸ್ ಜಾನ್ಸನ್‍ರನ್ನು ಆಹ್ವಾನಿಸಿರುವುದಾಗಿ ವರದಿಯಾಗಿದೆ. ಜನವರಿ 26, 2021ರಂದು ಭಾರತ 72ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗುವಂತೆ ಬ್ರಿಟನ್ ಪ್ರಧಾನಿಗೆ ಆಹ್ವಾನ ನೀಡಲಾಗಿದೆ.
ಇಂಗ್ಲೆಂಡ್‍ನಲ್ಲಿ ಮುಂದಿನ ವರ್ಷ ನಡೆಯಲಿರುವ ಜಿ-7 ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಬೋರಿಸ್ ಆಹ್ವಾನಿಸಿದ್ದಾರೆ. ಭಾರತದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಬೋರಿಸ್ ಮುಖ್ಯ ಅತಿಥಿಯಾಗಿ ಬರುವಂತೆ ಪ್ರಧಾನಿ ಮೋದಿ ಆಹ್ವಾನಿಸಿರುವುದಾಗಿ ವರದಿಯಾಗಿದೆ.

error: Content is protected !!