ಕೊನೆಗೂ ಗೆದ್ದ ಟೀಂ ಇಂಡಿಯಾ

December 3, 2020

ಕ್ಯಾನ್ ಬೆರಾ ಡಿ.3 : ಆಸ್ಟ್ರೇಲಿಯಾದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 13 ರನ್ ಗಳಿಂದ ಗೆದ್ದು ವೈಟ್ ವಾಶ್ ಮುಖಭಂಗದಿಂದ ತಪ್ಪಿಸಿಕೊಂಡಿದೆ.
ಬುಧವಾರ ಇಲ್ಲಿನ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 302 ರನ್ ಕಲೆಹಾಕುವ ಮೂಲಕ ಅತಿಥೇಯ ಅಸೀಸ್ ಗೆ ಗೆಲ್ಲಲು 303 ರನ್ ಗುರಿ ನೀಡಿತ್ತು. ಭಾರತ ನೀಡಿದ 303 ರನ್ ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 289 ರನ್ ಗಳಿಗೆ ಆಲೌಟ್ ಆಗುವ ಮೂಲಕ 13 ರನ್ ಗಳಿಂದ ಭಾರತಕ್ಕೆ ಶರಣಾಗಿದೆ.
ಆಸ್ಟ್ರೇಲಿಯಾ ಪರ ಆರೋನ್ ಪಿಂಚ್ 75, ಹೆನ್ರಿಕ್ಸ್ 22, ಗ್ರೀನ್ 21, ಕೆರ್ರಿ 38, ಮ್ಯಾಕ್ಸ್ ವೆಲ್ 59, ಅಗರ್ 28 ರನ್ ಬಾರಿಸಿದ್ದಾರೆ. ಭಾರತ ಪರ ಬೌಲಿಂಗ್ ನಲ್ಲಿ ಶಾರ್ದೂಲ್ ಠಾಕೂರ್ 3, ಜಸ್ ಪ್ರೀತ್ ಬುಮ್ರಾ, ನಟರಾಜನ್ ತಲಾ 2 ವಿಕೆಟ್ ಪಡೆದಿದ್ದಾರೆ.

error: Content is protected !!