ನೆಲ್ಯಹುದಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ : ಪಕ್ಷ ಬಲವರ್ಧನೆಗೆ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಕರೆ

03/12/2020

ಮಡಿಕೇರಿ ಡಿ. 3 : ಸುಳ್ಳು ಹೇಳಿ ಮತದಾರರನ್ನು ವಂಚಿಸುವ ಬಿಜೆಪಿಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತದಾರರ ಬಳಿ ಸತ್ಯವನ್ನೇ ಹೇಳಿ ಜಾತ್ಯತೀತ ಭಾರತವನ್ನು ಮತ್ತೊಮ್ಮೆ ಕಟ್ಟಲು ಕಾರ್ಯಕರ್ತರು ಸಜ್ಜಾಗಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಕೆ ಮಂಜುನಾಥ್ ಕುಮಾರ್ ಕರೆ ನೀಡಿದರು.
ಗ್ರಾ.ಪಂ ಚುನಾವಣೆ ಹಿನ್ನೆಲೆ ಪೂರ್ವ ಸಿದ್ಧತೆಯ ಬಗ್ಗೆ ನೆಲ್ಯಹುದಿಕೇರಿ ಶಾದಿ ಮಹಲ್‍ನಲ್ಲಿ ನಡೆದ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಮೂಲಕ ಸುಳ್ಳು ಹೇಳಿಕೊಂಡು ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಕೇಂದ್ರ ರಾಜ್ಯ ಸರ್ಕಾರ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬರುತ್ತಿದ್ದು ರೈತರು, ಕಾರ್ಮಿಕರು, ಬೆಳೆಗಾರರು, ಸಾಮಾನ್ಯ ವರ್ಗದ ಜನ ಸಂಕಷ್ಟದ ಜೀವನ ನಡೆಸುವಂತಾಗಿದೆ ಎಂದು ಟೀಕಿಸಿದರು.
ಕೊವೀಡ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರ ಸೇವೆ ಮಾಡಬೇಕಾದ ಸರ್ಕಾರ ಭ್ರμÁ್ಟಚಾರ ಮಾಡಿ ಜನರಿಗೆ ದ್ರೋಹ ಎಸಗಿದೆ ಎಂದು ಆರೋಪಿಸಿದರು.
ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿ ವಿಕೋಪ ದಿಂದ ರೈತರು, ಕಾರ್ಮಿಕರು, ಬೆಳೆಗಾರರು, ಸಂಕಷ್ಟದಲ್ಲಿದ್ದಾರೆ. ಕೃಷಿ ಫಸಲನ್ನೇ ನಂಬಿ ಜೀವನ ನಡೆಸುತ್ತಿರುವ ಬೆಳೆಗಾರರಿಗೆ ಯಾವುದೇ ಯೋಜನೆಗಳನ್ನು ನೀಡದೆ ಅನುದಾನಗಳನ್ನು ತರದೆ ಕಡೆಗಣಿಸಿದ್ದಾರೆ. ಕಾಡು ಪ್ರಾಣಿಗಳ ಹಾವಳಿ ನಡುವೆ ರೈತರು, ಕಾರ್ಮಿಕರು ಭಯದ ವಾತಾವರಣದಲ್ಲಿ ಜೀವನ ನಡೆಸುತ್ತಿದ್ದಾರೆ ಎಂದರು.
ಮಹಾ ಮಳೆಯಿಂದಾಗಿ ರಸ್ತೆಗಳು ಹಾಳಾಗಿ ನಡೆದಾಡಲೂ ಸಾಧ್ಯವಾಗದಂಥ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಜಿಲ್ಲೆಯಿಂದ ಆಯ್ಕೆಯಾದ ಸಂಸದ ಹಾಗೂ ಶಾಸಕರುಗಳು ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಕಡೆಗಣಿಸುತ್ತಿದ್ದಾರೆ. ಜನವಿರೋಧಿ ನೀತಿಯನ್ನುಅನುಸರಿಸುತ್ತಿರುವ ಬಿಜೆಪಿಯನ್ನು ಮತದಾರರು ತಿರಸ್ಕಾರ ಮಾಡಲಿದ್ದು, ಕಾಂಗ್ರೆಸ್ ನತ್ತ ಒಲವು ತೋರುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕುಶಾಲನಗರ ಬ್ಲಾಕ್‍ಕಾಂಗ್ರೆಸ್ ಅಧ್ಯಕ್ಷ ಬಿ. ಎಸ್. ಅನಂತ್‍ಕುಮಾರ್ ಮಾತನಾಡಿ, ಪ್ರತಿ ಗ್ರಾ. ಪಂ. ಮಟ್ಟದಲ್ಲಿ ಪಕ್ಷಕ್ಕೆ ಬೆನ್ನೆಲುಬಾಗಿರುವ ಕಾರ್ಯಕರ್ತರ ಸಭೆ ನಡೆಸಲಾಗುತ್ತಿದ್ದು. ಮುಂಬರುವ ಎಲ್ಲಾ ಚುನಾವಣೆಗಳನ್ನು ಎದುರಿಸಲು ಸಜ್ಜಾಗುತ್ತಿದೆ. ಕುಶಾಲನಗರ ಬ್ಲಾಕ್‍ನಲ್ಲಿ 22 ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಲಾಗಿದೆ. ಜನಸೇವೆ ಮಾಡುವ ಅಭ್ಯರ್ಥಿಗಳನ್ನು ಗುರುತಿಸಿ ವಲಯ ಮಟ್ಟದಲ್ಲೇ ಆಯ್ಕೆ ಮಾಡಲು ಅವಕಾಶ ನೀಡಲಾಗಿದ್ದು. ಕೆಪಿಸಿಸಿ ಮೂಲಕ ಅಂತಿಮ ಪಟ್ಟಿ ಬಿಡುಗಡೆ ಮಾಡಲಿದೆ. ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಪಕ್ಷ ಬಲವರ್ಧನೆಗೆ ಕೈ ಜೋಡಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಮುಂದಾಗಬೇಕೆಂದು ಕರೆ ನೀಡಿದರು.
ಬ್ಲಾಕ್‍ಉಸ್ತುವಾರಿ ಪ್ರದೀಪ್‍ರೈ ಮಾತನಾಡಿ, ಕಾಂಗ್ರೆಸ್ ಸರ್ಕಾರವಿದ್ದಾಗ ಜನಸಾಮಾನ್ಯರಿಗೆ ನೂರಾರು ಯೋಜನೆಗಳನ್ನು ನೀಡಿ ಅಭಿವೃದ್ಧಿ ಮೂಲಕ ಮುಂದೆ ತಂದಿದೆ. ಬಿಜೆಪಿ ಸರ್ಕಾರ ಯಾವುದೇ ಯೋಜನೆಗಳನ್ನು ನೀಡದೆ ಜನ ಸಾಮಾನ್ಯರನ್ನು ವಂಚಿಸುವ ಮೂಲಕ ಸುಳ್ಳು ಹೇಳಿ ಅಧಿಕಾರ ಗಿಟ್ಟಿಸಿಕೊಂಡಿರುವ ಬಿಜೆಪಿಯ ವಿರುದ್ಧ ಮುಂಬರುವ ಚುನಾವಣೆಯಲ್ಲಿ ಜನರುತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಎಲ್ಲಾ ವರ್ಗದ ಜನರನ್ನು ಒಂದಾಗಿ ಕಾಣುವ ಮೂಲಕ ಜಾತ್ಯತೀತ ನಿಲುವಿನಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಜನ ಹೆಚ್ಚು ಒಲವು ತೋರುತ್ತಿದ್ದು, ಪಕ್ಷ ಬಲವರ್ಧನೆಗೆ ಕಾರ್ಯಕರ್ತರು ಮುಂದಾಗಬೇಕೆಂದು ಕರೆ ನೀಡಿದರು.
ನೆಲ್ಲಿಹುದಿಕೇರಿ ವಲಯಕಾಂಗ್ರೆಸ್‍ಅಧ್ಯಕ್ಷ ಸಾಬು ವರ್ಗಿಸ್‍ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಐಎನ್‍ಟಿಯುಸಿ ಜಿಲ್ಲಾಧ್ಯಕ್ಷ ಗೋವಿಂದರಾಜ್‍ದಾಸ್, ಕಾರ್ಮಿಕಘಟಕ ಕಾರ್ಯದರ್ಶಿ ಅಜ್ಜಳ್ಳಿ ರವಿ, ಪರಿಶಿಷ್ಟ ಪಂಗಡಜಿಲ್ಲಾಧ್ಯಕ್ಷೆ ಪಂಕಜಾ, ಜಿಲ್ಲಾ ವಕ್ತಾರ ಸುರೇಶ್, ತಾಲ್ಲೂಕು ಕಾರ್ಯದರ್ಶಿ ಜನಾರ್ದನ್, ಪೂವಯ್ಯ, ಡಿಸಿಸಿ ಸದಸ್ಯೆಗೀತಾ, ನಗರಅಧ್ಯಕ್ಷ ಶರೀಫ್‍ಇಬ್ರಾಹಿಂ,ತಾಲ್ಲೂಕು ಪಂಚಾಯ್ತಿ ಸದಸ್ಯೆ ಸುಹದಾಅಶ್ರಫ್ , ನೆಲ್ಲಿಹುದಿಕೇರಿಗ್ರಾಮ ಪಂಚಾಯಿತಿ ಮಾಜಿಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷೆ ಸಫಿಯಾ ಮೊಹಮ್ಮದ್,ಸದಸ್ಯರಾದ ಎ ಕೆ ಹಕೀಂ, ಮುಸ್ತಫಾ, ಅಫ್ಸಲ್ ,ಸುಕ್ಕೂರ್, ಹನೀಫಾ, ಅನ್ನಮ್ಮ, ಇಂದಿರಾ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು .