ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ಚಂಬಂಡ ವಿಜುಬಿದ್ದಪ್ಪ ನೇಮಕ

03/12/2020

ಮಡಿಕೇರಿ ಡಿ.3 : ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರನ್ನಾಗಿ ಮಾಲ್ದಾರೆ ಗ್ರಾ.ಪಂ ಮಾಜಿ ಅಧ್ಯಕ್ಷ ಚಂಬಂಡ ವಿಜುಬಿದ್ದಪ್ಪ ಅವರನ್ನು ನೇಮಕ ಮಾಡಿರುವುದಾಗಿ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿಪೂಣಚ್ಚ ಅವರ ಶಿಫಾರಸ್ಸಿನ ಮೇರೆಗೆ ಈ ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.