ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 5376

04/12/2020

ಮಡಿಕೇರಿ ಡಿ. 4 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 17 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
15 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 12 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5376 ಆಗಿದ್ದು, 5231 ಮಂದಿ ಗುಣಮುಖರಾಗಿದ್ದಾರೆ. 72
ಸಕ್ರಿಯ ಪ್ರಕರಣಗಳಿದ್ದು, 73 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 63 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.