ಗ್ರಾ.ಪಂ ಚುನಾವಣೆ : ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಠೇವಣಿ ಮಾಡಲು ಡಿಸಿ ಆದೇಶ

04/12/2020

ಮಡಿಕೇರಿ ಡಿ.4 : ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಘೋಷಿಸಿರುವುದರಿಂದ, ಯಾವುದೇ ಅವ್ಯವಹಾರಗಳು ನಡೆಯದಂತೆ ಸುಗಮವಾಗಿ ಚುನಾವಣೆ ನಡೆಸುವ ಸಲುವಾಗಿ ಪರವಾನಗಿ ಹೊಂದಿರುವವರು ಶಸ್ತ್ರಾsಸ್ತ್ರಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಡಿ.8 ರ ಸಂಜೆ 5 ಗಂಟೆಯೊಳಗೆ ಠೇವಣಿ ಮಾಡಲು ಹಾಗೂ ಈ ಅವಧಿಯಲ್ಲಿ ಶಸ್ತ್ರಾಸ್ತ್ರಗಳನ್ನು ಒಯ್ಯುವುದನ್ನು ಮತ್ತು ಹಿಡಿದು ಓಡಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶಿಸಿದ್ದಾರೆ.
ಈ ಆದೇಶವು ಬ್ಯಾಂಕ್ ಕರ್ತವ್ಯದ ನಿಮಿತ್ತ ಬಂದೂಕು ಹೊಂದಿರುವುದಕ್ಕೆ ಅನ್ವಯಿಸುವುದಿಲ್ಲ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ (ಡಿಸೆಂಬರ್, 31 ರ ವರೆಗೆ) ಜಾರಿಯಲ್ಲಿರುತ್ತದೆ. ಆದೇಶದ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಾಲಂ 188 ರಡಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.